ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ.
ಪಾವಗಡ : ವೈದ್ಯೋ ನಾರಾಯಣೋ ಹರಿ ಎಂಬ ನಾಣ್ನುಡಿಯಂತೆ ಒಬ್ಬ ವೈದ್ಯನು ರೋಗಿಗಳ ವಿಷಯದಲ್ಲಿ ತನ್ನ ಪರಧಿಯಲ್ಲಿ ಸರ್ವಕಾಲ ಸರ್ವಾವಸ್ಥೆಯಲ್ಲೂ ರಕ್ಷಕನ ಪಾತ್ರವನ್ನು ಪೋಷಿಸುತ್ತಾನೆ ಎಂದು, ಕೇಂದ್ರ ಸಚಿವ ಎ ನಾರಾಯಣಸ್ವಾಮಿ ತಿಳಿಸಿದರು.
ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಗು ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯದ ಅನುದಾನ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ಕೊಡಬೇಕೆಂದು,
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಕೊರತೆ ಇರುವುದರಿಂದ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ, ಜಿಲ್ಲಾ ಆರೋಗ್ಯ ಅಧಿಕಾರಿಗಳು ಗಮನವಹಿಸಬೇಕೆಂದರು.
ತಾಯಿ ಮಕ್ಕಳ ಆಸ್ಪತ್ರೆಯಲ್ಲಿ 60 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಶಾಸಕ ವೆಂಕಟರಮಣಪ್ಪ ಮಾತನಾಡಿ, ಆಸ್ಪತ್ರೆಗೆ ವೈದ್ಯರಾಗಿ ಬಂದವರು ಕೇವಲ ಹಣಕ್ಕೆ ಪ್ರಾಮುಖ್ಯತೆ ಕೊಡದೆ ಸೇವೆಗೆ ಪ್ರಾಮುಖ್ಯತೆ ಕೊಡಬೇಕು,
ತಾಲೂಕಿನಲ್ಲಿ ಶಿಶು ಮರಣದ ದರ ಕಡಿಮೆಯಾಗಿರುವುದು ಪ್ರಶಂಸನೀಯವೆಂದರು. ಜೀವನದಲ್ಲಿ ಹಣ ಮುಖ್ಯವಲ್ಲ, ವೈದ್ಯರುಗಳು ತಮ್ಮ ಕಾಲಾವಧಿಯಲ್ಲಿ ಜನರಿಗೆ ಮಾಡಿದ ಒಳ್ಳೆಯ ಸೇವೆಯ ಕೆಲಸಗಳು ಶಾಶ್ವತವಾಗಿರುತ್ತದೆ ಎಂದರು.
ವೈದ್ಯರು ಸಕಾಲಕ್ಕೆ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಕೆಲಸದಲ್ಲಿ ತೊಡಗಬೇಕೆಂದು,
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ ಹೆಚ್ ಒ ಮಂಜುನಾಥ್,ಹೆಚ್ ವಿ ವೆಂಕಟೇಶ್ ರವರು, ಮುಖಂಡ ಶಂಕರ್ ರೆಡ್ಡಿ , ಪುರಸಭೆ ಅಧ್ಯಕ್ಷೆ ಧನಲಕ್ಷ್ಮೀ ,, ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರ ಹಾಗೂ ತಾಲ್ಲೂಕು ಆಡಳಿತಾಧಿಕಾರಿ ಡಾ. ಕಿರಣ್ ರವರು ಸೇರಿ ಇನ್ನೂ ಹಲವರು ಮಂದಿ ಉಪಸ್ಥಿತರಿದ್ದರು…