IMG 20230317 WA0039

Karnataka : ವಿಧಾನಸಭಾ ಚುನಾವಣೆ : 125 ಕಾಂಗ್ರೆಸ್ ಅಭ್ಯರ್ಥಿ ಗಳ ಪಟ್ಟಿ ಅಂತಿಮ…!

POLATICAL STATE
  • ಆರು ಜನ ಹಾಲಿ ಶಾಸಕರಿ ಗೆ ಟಿಕೆಟ್ ಇಲ್ಲ
  • ಪಾವಗಡ ಶಾಸಕ ವೆಂಕಟರಮಣಪ್ಪ ನರಿಗೆ ಟಿಕೆಟ್ ಇಲ್ಲ ಎನ್ನಲಾಗುತ್ತಿದೆ…
  • ಪಾವಗಡ ಟಿಕೆಟ್ ಕಗ್ಗಂಟು

, ನವದೆಹಲಿ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯು ಇಂದು ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ವಿವಿಧ ನಾಯಕರು ಹಾಜರಿದ್ದರು.

IMG 20230317 WA0020
ಕಾಂಗ್ರೆಸ್ ನಾಯಕರ ಸಭೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಯಿತು. 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಲಿ ಶಾಸಕರು ಮತ್ತು ಎಂ ಎಲ್ ಸಿ ಸೇರಿ 71 ಶಾಸಕರಿಗೆ ಟಿಕೆಟ್ ಪೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಸುಮಾರು ಮೂರು ಗಂಟೆಗಳ ಕಾಲ‌ ಸಭೆ ನಡೆಯಿತು. 60 ರಿಂದ 65 ಲಿಂಗಾಯತ ಸಮುದಾಯ, ದಲಿತ ಸಮುದಾಯ ದ ಎಡಗೈ ಬಣ ದವರು‌ ಟಿಕೆಟ್ ಆಕಾಂಕ್ಷಿಗಳು‌ ದೆಹಲಿ ಲಾಬಿ ಮಾಡುತ್ತಿದ್ದಾರೆ.

ಹಾಲಿ 6 ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಲಾಗಿದೆ. ಅವರಲ್ಲಿ ಪಾವಗಡ ಶಾಸಕ ವೆಂಕಟರವಣಪ್ಪ ಹೆಸರು ಇದೆ ಎನ್ನಲಾಗಿದೆ.

ರಾಹುಲ್ ಗಾಂಧಿ ರಾಜ್ಯ ಪ್ರವಾಸದ ನಂತರ ಕಾಂಗ್ರೆಸ್ ಪಟ್ಟಿ ಬಿಡುಗಡೆ ಯಾಗಲಿದೆ ಎನ್ಬುತ್ತಿವೆ ಪಕ್ಷದ‌ ಮೂಲಗಳು