IMG 20230319 WA0105

ಚಿತ್ರದುರ್ಗ: ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ….!

Genaral STATE


ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ


ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ- ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ


ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾರ್ಚ್.19:
ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

IMG 20230319 WA0098
   

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು. ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ. ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು. ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

IMG 20230319 WA0092
 

ಎಂ. ಚಂದ್ರಪ್ಪ ಜನೋಪಯೋಗಿ ಶಾಸಕ, ದಣಿವರಿಯದೆ ಕೆಲಸ ಮಾಡಿದ್ದಾರೆ. ನಾಲ್ಕು ವರ್ಷದಲ್ಲಿ ಹೊಳಲ್ಕೆರೆ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಕಿರಿದಾದ ರಸ್ತೆಗಳು ಅಭಿವೃದ್ಧಿಯಾಗಿವೆ. ಸರ್ಕಾರಿ ಕಟ್ಟಡಗಳು ಆಧುನಿಕ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಗಿಂತಲೂ ಉತ್ತಮವಾದ ತಾಲ್ಲೂಕು ಆಸ್ಪತ್ರೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಪುರಸಭೆ ಕಟ್ಟಡ, ಕ್ಷೇತ್ರದ ಎಲ್ಲೆಡೆ ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದಾರೆ ಎಂದರು.

ರಾಜ್ಯದ 05 ಲಕ್ಷ ಸ್ತ್ರೀಸಾಮಥ್ರ್ಯ ಸಂಘಗಳಿಗೆ ಸಹಾಯಧನ ನೀಡಿ, ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಈಗಾಗಲೆ ಅನುಷ್ಠಾನಗೊಂಡಿದ್ದು, ಮಾ. 23 ರಂದು ಯುವಕರ ಸಂಘಗಳಿಗೆ ಸುತ್ತುನಿಧಿಯನ್ನು ನೀಡಿ, ಸುಮಾರು 05 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

ಸರ್ಕಾರದಿಂದ 10 ಹೆಚ್.ಪಿ. ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೂ.6 ಸಾವಿರ ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ಅನುದಾನ ನೀಡಿ ರೂ.10 ಸಾವಿರ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಸ್ತ್ರೀ ಸಾಮಥ್ರ್ಯ ಯೋಜನೆ ಅಡಿ ಸ್ವ ಸಹಾಯ ಸಂಘಗಳಿಗೆ ಸಹಾಯಧನ, ಉಚಿತವಾಗಿ ಪಿ.ಯು.ಸಿ, ಪದವಿ ಶಿಕ್ಷಣ, ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿ ಗೊಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಸರ್ಕಾರದಿಂದ 5 ಲಕ್ಷ ಯುವಕರಿಗೆ ಉದ್ಯೋಗ ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ರೈತರಿಗೆ ಜೀವವಿಮೆ, ಲಂಬಾಣಿ(ಬಂಜಾರ), ಭೋವಿ ಸೇರಿದಂತೆ ಅನೇಕ ಪರಿಶಿಷ್ಟ ವರ್ಗದ ನಿಗಮಗಳನ್ನು ಸ್ಥಾಪಿಸಲಾಗಿದೆ. ಹಿಂದುಳಿದ ವರ್ಗಗಳ ಏಳಿಗೆಗಾಗಿ ಬಜೆಟ್‍ನಲ್ಲಿ ಅಧಿಕ ಹಣ ಮೀಸಲಿಡಲಾಗಿದೆ ಎಂದರು.

ಹೊಳಲ್ಕೆರೆ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ 6000 ಕಿ.ಮೀ. ಉದ್ದ ಹೆದ್ದಾರಿ ನಿರ್ಮಿಸಲಾಗಿದೆ. 7100 ಕೋಟಿ ವೆಚ್ಚದಲ್ಲಿ ರೈಲ್ವೇ ಸಂಪರ್ಕ ಅಭಿವೃದ್ಧಿ ಪಡಿಸಲಾಗುತ್ತದೆ. ರೈತರಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಬ್ಸಿಡಿ ನೀಡಲಾಗಿದೆ. ಎಸ್.ಸಿ. ಎಸ್.ಟಿ ಜನಾಂಗದವರಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ. ಭೂ ರಹಿತರಿಗೆ ಭೂ ಖರೀದಿಗೆ ರೂ.20 ಲಕ್ಷ ನೀಡಲಾಗುತ್ತಿದೆ. ರಾಜ್ಯದ ಜನರ ಅಭಿವೃದ್ಧಿಯ ಧ್ಯೇಯ ಹೊಂದಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ. ಸಿಇಓ ಎಂ.ಎಸ್.ದಿವಾಕರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ಪರುಶುರಾಮ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ಮತ್ತಿತರರ ಗಣ್ಯಮಾನ್ಯರು ಇದ್ದರು. ತಹಶಿಲ್ದಾರ್ ನಾಗರಾಜ್ ಸ್ವಾಗತಿಸಿದರು.
ಸಮಾರಂಭಕ್ಕೂ ಮುನ್ನ ಹೊಳಲ್ಕೆರೆ ಬಳಿಯ ಕುಡಿನೀರಕಟ್ಟೆ ಸಮೀಪದ ಹೆಲಿಪ್ಯಾಡ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಲ್ಲದೆ ಹೊಳಲ್ಕೆರೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪುರಸಭೆ ಕಟ್ಟಡ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 54 ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಸಮಾರಂಭ ಜರುಗಿದ ವೇದಿಕೆಯ ಬಳಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಶಾಸಕರ ಅನುದಾನದಡಿ ಕಲ್ಪಿಸಲಾಗಿರುವ ಉಚಿತ ಬಸ್‍ಗಳ ಉದ್ಘಾಟನೆ ನೆರವೇರಿಸಿದರು.