IMG 20230406 WA0020

BJP :ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ…!

POLATICAL STATE

ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ, ಏಪ್ರಿಲ್ 06: ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಸಿಗೆ ಇರಲಿಲ್ಲ, ಅವರದ್ದು ಕೇವಲ ಡೋಂಗಿತನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು ನಮ್ಮ ನಿರ್ಧಾರಗಳು ಕಾಂಗ್ರೆಸ್ ಗೆ ತಿರುಗು ಬಾಣ ಆಗಲಿದೆ. ಕಾಂಗ್ರೆಸ್ ಮಾಡದೆ ಇದ್ದುದನ್ನು ಬಿಜೆಪಿ ಮಾಡಿ ತೋರಿಸಿದೆ ಎಂದರು.

ಇಷ್ಟು ದಿನದ ದೀನದಲಿತನ್ನು ಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿತ್ತು. ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಹತಾಶೆಯಿಂದ ಕಾಂಗ್ರೆಸ್ ಆರೋಪಿಸುತ್ತಿದೆ. ಇಷ್ಟು‌ದಿನ ಅವರು ಹೇಳಿಕೊಂಡು ಬಂದಿದ್ದು ಅವರಿಗೇ ತಿರುಗು ಬಾಣ ಆಗಲಿದೆ ಎಂದರು.

ಅಂತಿಮ ಪಟ್ಟಿ ಬಿಡುಗಡೆ
ರಾಜ್ಯ ಕೋರ್ ಕಮಿಟಿ ಸಭೆ ನಿನ್ನೆ ಸಭೆ ಮುಕ್ತಾಯವಾಗಿದೆ. ಏಪ್ರಿಲ್ 8 ರಂದು ಸಭೆ ಸೇರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಸ್ಟಾರ್ ಪ್ರಚಾರಕರು
ಸೆಲೆಬ್ರಿಟಿಗಳು ಬಿಜೆಪಿ‌ ಪರ‌ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ತೆಲಗು ಚಿತ್ರನಟ ಪವನ್ ಕಲ್ಯಾಣ್ ಅವರನ್ನು ಕೇಂದ್ರ ನಾಯಕರು ಭೇಟಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಕಾದು ನೋಡಿ ಎಂದರು.

ಜನ ತೀರ್ಮಾನ
ಕೊಲೆ ಆರೋಪಿ ವಿನಯ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,
ವಿನಯ್ ಕುಲಕರ್ಣಿ ಪ್ರಕರಣ ನ್ಯಾಯಾಲಯದಲ್ಲಿದೆ‌.ಕಾನೂನಾತ್ಮಕ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಈ‌ ರೀತಿಯ ಪ್ರಕರಣಗಳಲ್ಲಿ ಜನರೇ ತೀರ್ಮಾನ ಮಾಡುತ್ತಾರೆ ಎಂದರು.

IMG 20230406 WA0019

ಪ್ರಕರಣದ ಹಂತ ಪರಿಶೀಲಿಸಿ ಟಿಕೆಟ್
ಅಪರಾಧ ಹಿನ್ನೆಲೆಯುಳ್ಳವರಿಗೆ ಬಿಜೆಪಿ ಟಿಕೆಟ್ ನೀಡಿರುವ ಬಗ್ಗೆ ಮಾತನಾಡಿ, ಕಾನೂನು ಬಹಳ‌ ಸ್ಪಷ್ಟವಾಗಿದೆ. ಪ್ರಕರಣಗಳು ವಿವಿಧ ಹಂತದಲ್ಲಿ ಇರುತ್ತವೆ. ಇದನ್ನೆಲ್ಲ ಗಮನಿಸಿ ಟಿಕೆಟ್ ನೀಡಲಾಗುವುದು ಎಂದರು.

ವರದಿ ಪರಿಶೀಲಿಸಿ ಟಿಕೆಟ್ ಹಂಚಿಕೆ
ಹಾಲಿ‌ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮೂರು ನಾಲ್ಕು ಹಂತದಲ್ಲಿ ಪರಿಶೀಲಿಸಿ ವರದಿ‌ ಪಡೆದುಕೊಳ್ಳಲಾಗಿದೆ. ಅದನ್ನೆಲ್ಲ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುವುದು ಎಂದರು.

ವದಂತಿ
ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಅದಕ್ಕೆ ಯಾರು ಕಿವಿಗೊಡಬಾರದು ಎಂದರು.

IMG 20230406 WA0021

ಕಾಂಗ್ರೆಸ್ ಮಾತಿಗೂ ಕೃತಿಗೂ ವ್ಯತ್ಯಾಸವಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
ಕಾಂಗ್ರೆಸ್ ದ್ವಂದ್ವ ‌ನೀತಿ ಅನುಸರಿಸುತ್ತಿದ್ದು, ಅವರ ಮಾತು ಮತ್ತು ಕೃತಿಯಲ್ಲಿ ವ್ಯತ್ಯಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಅವರು ಇಂದು ರಾಜ್ಯ ಪರಿಶಿಷ್ಟ ಸಮುದಾಯಗಳ ಒಳಮೀಸಲಾತಿ ಜಾರಿಗೊಳಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಸಮುದಾಯದ ಒಕ್ಕೂಟ ಏರ್ಪಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಾತಿ ವಿಷ ಬೀಜ ಬಿತ್ತಲು ಮುಂದಾಗಿ, ಧರ್ಮ ಒಡೆಯಲು ಮುಂದಾದರು.ಮೀಸಲಾತಿ ಹೆಚ್ಚಿಸುವ ಬಗ್ಗೆ ಕಾಂಗ್ರೆಸ್ ಗೆ ಬದ್ಧತೆಯಾಗಲಿ ರಾಜಕೀಯ ಇಚ್ಛಾಶಕ್ತಿಯಾಗಲಿ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇಲ್ಲ ಎಂದರು.

ದಲಿತರು ಎಚ್ಚರಿಕೆ ವಹಿಸಬೇಕು
ಒಳ ಮೀಸಲಾತಿ ಹೋರಾಟ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಒಳ ಮೀಸಲಾತಿಯನ್ನು ಯಾರು ಮಾಡತ್ತಾರೆ ಅವರು ಬಸ್ಮವಾಗತ್ತಾರೆ ಅಂತ ಹೇಳುತ್ತಿದ್ದರು. ಅಧಿಕಾರ ಶಾಶ್ವತ ಅಲ್ಲಾ, ಜನರ ಹೃದಯದಲ್ಲಿ ದೊರೆಯುವ ಸ್ಥಾನ ದೊಡ್ಡದು ಎಂದರು. ಮೀಸಲಾತಿ ಹೆಚ್ಚಳ ಮಾಡುವಾಗ ಸರ್ವಪಕ್ಷದ ಸಭೆ ಕರೆದು ಎಲ್ಲರ ಒಪ್ಪಿಗೆ ಪಡೆಯಲಾಗಿತ್ತು. ಆದರೆ ಈಗ ಇದು ಸಂವಿಧಾನಾತ್ಮಕವಲ್ಲ ಎನ್ನುವ ಕಾಂಗ್ರೆಸ್ ಅವರದ್ದು ಒಳಗೊಂದು ಹೊರಗೊಂದು ನೀತಿ ಎಂದರು. ಇಂತಹ ಕಾಂಗ್ರೆಸ್ ನಿಂದ ದಲಿತರು ಎಚ್ಚರಿಕೆಯಿಂದ ಇರಬೇಕು ಎಂದರು.

ಸ್ಪಷ್ಟಪಡಿಸಲಿ
ಸಿದ್ದರಾಮಯ್ಯ ಅವರು ಮೀಸಲಾತಿ ಹಾಗೂ ಒಳ ಮೀಸಲಾತಿ ಪರವಾಗಿದ್ದರೋ ವಿರೋಧವಾಗಿದ್ದರೋ ಎಂದು ಸ್ಪಷ್ಟ ಚಿತ್ರಣ ನೀಡಲಿ. ಅದು ಬಿಟ್ಟು ದ್ವಂದ್ವ ನೀತಿ ಬೇಡ ಎಂದರು. ಕೇಂದ್ರಕ್ಕೆ ಸಲ್ಲಿಸಿರುವ ಪತ್ರದ ಪ್ರತಿ ಪ್ರದರ್ಶನ ಮಾಡಿದ ಸಿಎಂ ಅವರು ನಾನು ಬೇರೆ ಮುಖ್ಯಮಂತ್ರಿಗಳ ರೀತಿ ಅಲ್ಲಾ, ಕೆಲಸ ಮಾಡಿ ಮಾತನಾಡುವ ಮುಖ್ಯಮಂತ್ರಿ ಎಂದರು.

ಅನ್ಯಾಯ ಮಾಡಿಲ್ಲ
ನಾವು ಯಾರಿಗೂ‌, ಯಾವ ಸಮುದಾಯದಕ್ಕೂ ಅನ್ಯಾಯ ಮಾಡಿಲ್ಲ..ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಾಂಡ ಅಭಿವೃದ್ಧಿ ಮಾಡಿದರು , ಆದರೆ ಈಗ ಅವರ ಪರವಾಗಿ ಕಾಂಗ್ರೆಸ್ ಮಾತನಾಡುತ್ತಿದೆ. ತಾಂಡಗಳಿಗೆ ಹಕ್ಕು ಪತ್ರಕೊಟ್ಟಿದ್ದು ನಾವು, .ನಾವು ಇನ್ನೊಬ್ಬರಿಗೆ ನೋವಾಗದಂತೆ ಮೀಸಲಾತಿ ನೀಡಿದ್ದು, ದಲಿತರನ್ನು ಎದರು ಹಾಕಿಕೊಂಡು ಯಾವ ಸರ್ಕಾರ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರ ಬರೋದು ಕನಸು. ಒಳ ಮೀಸಲಾತಿಯನ್ನು ಕಾಂಗ್ರೆಸ್ ಮುಟ್ಟಿದ್ರೆ ಕ್ರಾಂತಿಯಾಗುತ್ತದೆ ಎಂದರು.

ಬದಲಾವಣೆ ಬೀಜ ಕರ್ನಾಟಕದಿಂದ ಬಿತ್ತನೆಯಾಗಲಿದೆ
ಅಸಾಧ್ಯವನ್ನು ಸಾಧ್ಯ ಮಾಡಿ‌ ತೋರಿಸಿಸಲಾಗಿದೆ. ಇದು ಸಾಮಾಜಿಕ, ಸಮಾನತೆ ಇರುವ, ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ ತತ್ವಾದರ್ಶಗಳನ್ನು ಇಟ್ಟುಕೊಂಡು ಮಾಡಿರುವ ಕಾನೂನು. , ದೇಶದಲ್ಲಿ ಇದು ಮಹತ್ತರ ಬದಲಾವಣೆಗೆ ನಾಂದಿಯಾಗಲಿದೆ. ದೇಶದ ಬದಲಾವಣೆ ಬೀಜ ಕರ್ನಾಟಕದಿಂದ ಬಿತ್ತನೆಯಾಗಲಿದೆ. ಬಂಜಾರ, ಭೋವಿ, ಕುಂಚಾ, ಕೊರಮ ಬಂಧುಗಳ ಮೀಸಲಾತಿಯ‌ನ್ನು ಸೂರ್ಯ, ಚಂದ್ರ ಇರುವವರಗೂ ತೆಗೆಯುವದಿಲ್ಲ ಎಂದರು.

ಮೊದಲ ತುತ್ತು ದಲಿತ ಸಮುದಾಯಕ್ಕೆ ಮೀಸಲು
ಜನ ಕಾಂಗ್ರೆಸ್ ಸುಳ್ಳನ್ನು ನಂಬಬಾರದು . ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ 7 ಡಿ ಕಾನೂನನ್ನು ತೆಗೆಯಲಾಗುವುದು. ದಲಿತ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳುವ ಕಾನೂನು ಸಿದ್ದರಾಮಯ್ಯ ಮಾಡಿದ್ದರು. ನನ್ನ ಅನ್ನದ ಮೊದಲ ತುತ್ತು ದಲಿತ ಸಮುದಾಯಕ್ಕೆ ಮೀಸಲು ಎಂದರು.