ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 34 ಸಚಿವರ ಖಾತೆ ಗಳಳು ಅಧಿಕೃತ ವಾಗಿ ಪ್ರಕಟವಾಗಿವೆ
ಬೆಂಗಳೂರು, ಮೇ 29 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಇದೇ ಶನಿವಾರ 24 ನೂತನ ಸಚಿವರು ಸೇರ್ಪಡೆಯಾಗಿದ್ದರು. ಇದರೊಂದಿಗೆ 34 ಸಚಿವರ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂದಿತ್ತು.
ನೂತನ ಸರ್ಕಾರದ 34 ಸಚಿವ ರ ಸಂಪುಟ ದ ಖಾತೆ ಗಳ ಹಂಚಿಕೆ ಗೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ರಿಂದ ಅಧೀಕೃತ ಆದೇಶ ಹೊರಬಿದ್ದಿದೆ.
ಸಚಿವರ ವಿವರ
ಹೆಚ್ ಕೆ ಪಾಟೀಲ್, ಕೃಷ್ಣಬೈರೇಗೌಡ, ಎನ್ ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಹೆಚ್. ಸಿ.ಮಹದೇವಪ್ಪ ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ. ಶಿವಾನಂದ ಪಾಟೀಲ್, ಆರ್.ಬಿ. ತಿಮ್ಮಾಪುರ್, ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಶರಣ ಪ್ರಕಾಶ್ ಪಾಟೀಲ್, ಮಾಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್, ಡಾ.ಡಿ.ಸುಧಾಕರ್, ಸಂತೋಷ್ ಲಾಡ್, ಎನ್.ಎಸ್.ಬೋಸರಾಜು, ಬಿ. ಎಸ್.ಸುರೇಶ್ ( ಬೈರತಿ ಸುರೇಶ್ ),ಸಾರೇಕೊಪ್ಪ ಮಧು ಬಂಗಾರಪ್ಪ, ಎಂ. ಸಿ.ಸುಧಾಕರ್ ಹಾಗೂ ಬಿ.ನಾಗೇಂದ್ರ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು
ಮೊದಲ ಬಾರಿಗೆ ಸಚಿವರಿವರು:
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕೆ.ವೆಂಕಟೇಶ್, ಮಧುಗಿರಿ ವಿಧಾನಸಭಾ ಕ್ಷೇತ್ರದ ಕ್ಯಾತಸಂದ್ರ ನಂಜಪ್ಪ ರಾಜಣ್ಣ, ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಂಕಾಳ ವೈದ್ಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷೀ ಹೆಬ್ಬಾಳ್ಕರ್, ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸರಾಜು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬೈರತಿ ಸುರೇಶ್, ಸೊರಬ ವಿಧಾನಸಭಾ ಕ್ಷೇತ್ರದ ಮಧು ಬಂಗಾರಪ್ಪ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಂ ಸಿ ಸುಧಾಕರ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ ನಾಗೇಂದ್ರ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಉಳಿದವರು ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ಯೊಂದಿಗೆ ಸಿದ್ದು ಸರ್ಕಾರ ಸಂಪೂರ್ಣವಾಗಿ ಟೇಕ್ ಆಫ್ ಆಗಿದೆ ಮುಂದೆ ಗ್ಯಾರಂಟಿ ಗಳನ್ನು ಯಾವರೀತಿ ಜಾರಿ ಮಾಡುತ್ತಾರೆ ಎಂಬುದು ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿರುವ ಸಂಗತಿ.