Revenue Minister

Karnataka :ಕಾವೇರಿ 2.0 ಜನಸ್ನೇಹಿ ತಂತ್ರಾಂಶ….!

Genaral STATE

ಕಾವೇರಿ 2.0 ಜನಸ್ನೇಹಿ ತಂತ್ರಾಂಶಕ್ಕೆ ಕಂದಾಯ ಸಚಿವರಿಂದ ಚಾಲನೆ

ಬೆಂಗಳೂರು, ಜೂನ್ 01, (ಕರ್ನಾಟಕ ವಾರ್ತೆ) : ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಗಾಂಧಿನಗರ ಜಿಲ್ಲಾ ನೋಂದಣಾಧಿಕಾರಿ ಕಛೇರಿಯಲ್ಲಿ ಕಾವೇರಿ 2.0 ಜನಸ್ನೇಹಿ ತಂತ್ರಾಂಶಕ್ಕೆ ಸನ್ಮಾನ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೇಗ ತರುವ ಉದ್ದೇಶದಿಂದ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ನಾಗರೀಕರಿಗೆ ಸೇವೆ ನೀಡುತ್ತಾ ಬಂದಿದೆ. ಇದೇ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 ತಂತ್ರಾಂಶವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಈ ತಂತ್ರಾಂಶದ ಬಳಕೆಯಿಂದ ನಾಗರೀಕರು ತಮ್ಮ ಸ್ವತ್ತುಗಳ ನೋಂದಣಿ ಸಂದರ್ಭದಲ್ಲಿ  ಉಪನೋಂದಣಿ ಕಛೇರಿಯಲ್ಲಿ ನೋಂದಣಿಗೆ ಕಾಯಬೇಕಾದ ಪ್ರಸಂಗ ಬರುವುದಿಲ್ಲ. ತಂತ್ರಾಂಶವು ವೆಬ್ ಆಧರಿತವಾಗಿದ್ದು ಗಣಕಯಂತ್ರದ ಮೂಲಕ ಅಂತರ್‍ಜಾಲ ಸಂಪರ್ಕದಿಂದ ಉಪನೋಂದಣಿ ಕಚೇರಿಗೆ ನೋಂದಣಿ ಪೂರ್ವದಲ್ಲಿ ಸಲ್ಲಸಬೇಕಾದ ದಾಖಲೆಗಳನ್ನು ಆನ್ ಲೈನ್ ಮೂಲಕ ಸಂಬಂಧಪಟ್ಟ ಉಪನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು, ನಂತರ ಉಪನೋಂದಣಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಸಬೇಕಾದ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳ ವಿವರದೊಂದಿಗೆ ಆನ್‍ಲೈನ್ ಮೂಲಕವೇ  ದಾಖಲೆಗಳನ್ನು ಪರಿಶೀಲಿಸಿ ನಾಗರೀಕರ ಲಾಗ್‍ಇನ್‍ಗೆ ಕಳುಹಿಸುತ್ತಾರೆ. ನಾಗರೀಕರು ಶುಲ್ಕಗಳನ್ನು ಆನ್‍ಲೈನ್ ಮೂಲಕ ನೇರವಾಗಿ ಖಜಾನೆಗೆ ಜಮಾ ಮಾಡುವ ಮೂಲಕ ನೋಂದಣಿ ದಿನಾಂಕವನ್ನು ನಿಗದಿ ಮಾಡಿಕೊಳ್ಳಬಹುದಾಗಿದೆ. ಆಮೂಲಕ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಿನಗಟ್ಟಲೆ ಕಾಯುತ್ತಿದ್ದ ನಾಗರೀಕರಿಗೆ ಕೆಲವೇ ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾವೇರಿ ತಂತ್ರಾಂಶವು ಸರ್ಕಾರದ ಬೇರೆ ಇಲಾಖೆಗಳ ತಂತ್ರಾಂಶಗಳಾದ ಭೂಮಿ, ಇ-ಸ್ವತ್ತು, ಇ-ಆಸ್ತಿಗಳೊಂದಿಗೆ ಸಂಯೋಜನೆಯಾಗಿರುವ ಕಾರಣ ಮೋಸ – ವಂಚನೆಗಳಿಗೆ ಕಡಿವಾಣ ಹಾಕಲಾಗಿದೆ. ಎಂದು ತಿಳಿಸಿದರು

ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನಾಗರೀಕರಿಗೆ ಮೂಲ ಸೌಕರ್ಯ ಒದಗಿಸುವುದನ್ನು ಪ್ರಶಂಶಿಸಿದ ಸಚಿವರು, ಸರ್ಕಾರವು ಜನಸ್ನೇಹಿಯಾಗಿ ಕೆಲಸ ಮಾಡಲು ಅಧಿಕಾರಿ ವರ್ಗದ ಸಹಕಾರ ಅತ್ಯಂತ ಅವಶ್ಯಕವಾಗಿದೆ ಹೀಗಾಗಿ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕಾವೇರಿ 2.0 ತಂತ್ರಾಂಶದ ಮೂಲಕ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮತ್ತಷ್ಟು ಜನಸ್ನೇಹಿಯಾಗಲಿ ಹಾಗೂ ಈ ಮಹತ್ಕಾರ್ಯದಲ್ಲಿ ಕೆಲಸ ನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೂ ಅಭಿನಂದನೆ ಹಾಗೂ ಶುಭಾಶಯಗಳನ್ನು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಶ್ರೀಮತಿ.ಡಾ.ಮಮತ ಬಿ.ಆರ್. ಅವರು,  ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಕಾವೇರಿ 2.0 ತಂತ್ರಾಂಶದ ಹರಿವು ಮತ್ತು ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಸದ್ಯ ರಾಜ್ಯದ 256 ಉಪನೋಂದಣಿ ಕಚೇರಿಗಳ ಪೈಕಿ 196 ಉಪನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಜಾರಿಯಾಗಿದ್ದು, ಈ ದಿನ ಮಾನ್ಯ ಕಂದಾಯ ಸಚಿವರು ಗಾಂಧಿನಗರ ಜಿಲ್ಲಾ ನೋಂದಣಿ ವ್ಯಾಪ್ತಿಯ           9 ಉಪನೋಂದಣಿ ಕಛೇರಿಯಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್,   ಇ-ಆಡಳಿತ ಕಾರ್ಯದರ್ಶಿಗಳಾದ ವಿ.ಪೆÇೀನ್ನು ರಾಜ್  ಹಾಗೂ ಉಪ ನೋಂದಣಿ, ಮಹಾ ಪರಿವೀಕ್ಷಕರು, ಸಹಾಯಕ ನೋಂದಣಿ ಮಹಾಪರಿವೀಕ್ಷಕರು, ಗಾಂಧಿನಗರ ಜಿಲ್ಲಾ ನೋಂದಣಾಧಿಕಾರಿಗಳು, ಗಾಂಧಿನಗರ ಜಿಲ್ಲಾ ನೋಂದಣಿ ವ್ಯಾಪ್ತಿಯ ಎಲ್ಲಾ ಉಪ ನೋಂದಣಾಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.