ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ.
ಪಾವಗಡ : ತಾಲೂಕಿನಲ್ಲಿರುವ ಕೆಲವು ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮಗಳನ್ನು ಗಳಿಗೆ ತೂರಿ ಮನ ಬಂದಂತೆ ಶಾಲೆಗಳನ್ನು ನಡೆಸುತ್ತಿವೆ ಎಂದು ತಾಲೂಕು ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬೇಟಿ ನೀಡಿ ಮನವಿ ಸಲ್ಲಿಸಿದರು.
ಶಿಕ್ಷಣ ಇಲಾಖೆ ಪ್ರತಿ ಶನಿವಾರ ಎಲ್ಲಾ ಶಾಲೆಗಳಲ್ಲಿ ಮೊದಲ ಎರಡು ಅವಧಿಗಳು ದೈಹಿಕ ಶಿಕ್ಷಣಕ್ಕೆ ಮೀಸಲಿಟ್ಟಿದ್ದು, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪ್ರಾಮುಖ್ಯತೆ ನೀಡಿದೆ.
ಆದರೆ ತಾಲೂಕಿನ ಕೆಲವು ಖಾಸಗಿ ಶಾಲೆಗಳು ಪೂರ್ಣಪ್ರಮಾಣದ ಶಾಲೆಗಳನ್ನು ಆರಂಭಿಸಿರುವುದರಿಂದ ಖಾಸಗಿ ಶಾಲೆಯ ಮಕ್ಕಳು ದೈಹಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಎಂದು ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಅದೇ ರೀತಿ ಕೆಲ ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ ಶಿಕ್ಷಣ ಇಲಾಖೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಪರಿಗಣಿಸದೆ ,ಮನಬಂದಂತೆ ನೇಮಕ ಮಾಡಿಕೊಂಡಿರುತ್ತಾರೆ ಎಂದು ಆರೋಪಿಸಿ ತಕ್ಷಣ ಅಂತಹ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ.
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಾರ್ಯಾಲಯದ(B.R.C) ಕೆಲವು ಸಿಬ್ಬಂದಿಗಳು ಖಾಸಗಿ ಟ್ಯೂಷನ್ ಮಾಡುತ್ತಿರುವುದು, ಗಮನಕ್ಕೆ ಬಂದಿದ್ದು.
ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಶಿಕ್ಷಕರು ಖಾಸಗಿ ಟ್ಯೂಷನ್ ಮಾಡಬಾರದೆಂಬ ನಿಯಮವಿದ್ದರೂ ಕೆಲ ಸಿಬ್ಬಂದಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ಖಾಸಗಿ ಟ್ಯೂಷನ್ ಮಾಡುತ್ತಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ಈ ಕೂಡಲೇ ಕ್ರಮ ವಹಿಸುವಂತೆ ತಾಲೂಕು ಮೀಸಲಾತಿ ಸಂರಕ್ಷಣಾ ಒಕ್ಕೂಟದ ಉಪಾಧ್ಯಕ್ಷರಾದ ಗೋವಿಂದ ನಾಯ್ಕ, ಪದಾಧಿಕಾರಿಗಳಾದ ಚಾಂಪ್ಲ ನಾಯ್ಕ, ಪಾರ್ಥಸಾರಥಿ, ಬಿ. ಆರ್ .ಸಿ ಪವನ್ ಕುಮಾರ್ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.