ವಿಧಾನ ಪರಿಷತ್ ಉಪ ಚುನಾವಣೆ – ನಾಮಪತ್ರ ಸಲ್ಲಿಕೆ
ಬೆಂಗಳೂರು, ಜೂನ್ 20 (ಕರ್ನಾಟಕ ವಾರ್ತೆ):
ಮೊದಲನೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್ :
ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‍ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೇಸ್ ಪಕ್ಷದಿಂದ ಮೊದಲನೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್ ಅವರು ಉಪಸ್ಥಿತರಿದ್ದರು.
ಎರಡನೆಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎನ್ ಎಸ್ ಬೋಸರಾಜು :
ಎನ್. ಎಸ್. ಬೋಸ ರಾಜು ಅವರು ಕಾಂಗ್ರೇಸ್ ಪಕ್ಷದ ಎರಡನೇ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಮುನಿಯಪ್ಪ ಅವರು ಉಪಸ್ಥಿತರಿದ್ದರು.
ಮೂರನೆಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿಪ್ಪಣ್ಣಪ್ಪ ಕಮಕನೂರು :
ತಿಪ್ಪಣ್ಣಪ್ಪ ಕಮಕನೂರು ಅವರು ಕಾಂಗ್ರೇಸ್ ಪಕ್ಷದ ಮೂರನೆಯ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.