ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ
ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿಗಳು
ಕೇಂದ್ರ ಆಹಾರ ಸಚಿವ ಪಿಯೂಶ್ ವೇದಪ್ರಕಾಶ್ ಗೋಯಲ್ ಜತೆ ಚರ್ಚಿಸುವ ಭರವಸೆ ನೀಡಿದ ಅಮಿತ್ ಶಾ
ನವದೆಹಲಿ , ಜೂನ್ :21 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು.
ಸೌಹಾರ್ದ ಭೇಟಿಯ ವೇಳೆ , “ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.