ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ – ಸಭಾಧ್ಯಕ್ಷ ಯು.ಟಿ.ಖಾದರ್
ಬೆಂಗಳೂರು, 4ನೇ ಜುಲೈ(ಕರ್ನಾಟಕ ವಾರ್ತೆ):
ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.
- ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.
ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.