IMG 20230704 WA0047

ಪಾವಗಡ: ಕೆಎಸ್‍ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ

DISTRICT NEWS ತುಮಕೂರು

ಕೆಎಸ್‍ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ
ತುಮಕೂರು(ಕ.ವಾ.)ಜು.4: ಕೆಎಸ್‍ಪಿಡಿಸಿಎಲ್ ಪಾವಗಡ ಸೋಲಾರ್ ಪಾರ್ಕ್ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.
ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೆ.ಎಸ್.ಪಿ.ಡಿ.ಸಿ.ಎಲ್.ನ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರಲ್ಲದೆ ಯಾವ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲವೂ ಆ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಮೂರನೇ ವ್ಯಕ್ತಿಯು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.
ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಯಾವ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆಗಳು ಇದ್ದಲ್ಲಿ ಕೂಡಲೇ ಸರಿಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನಲ್ಲಿ ಒಂದೇ ಒಂದು ಶವಾಗಾರ ಕೇಂದ್ರ ಇರುವುದರಿಂದ ದೂರದ ಹಳ್ಳಿಗಳಿಂದ ಮೃತ ದೇಹಗಳನ್ನು ಸಾಗಿಸಲು ಕಷ್ಟ ಆಗುತ್ತಿದೆ ಎಂದು ಪೆÇಲೀಸ್ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತಾಲ್ಲೂಕಿನಲ್ಲಿ ಮತ್ತೊಂದು ಶವಾಗಾರ ಕೇಂದ್ರವನ್ನು ಕೋಟಗುಡ್ಡದಲ್ಲಿ ಸ್ಥಾಪಿಸುವುದಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಟಿಹೆಚ್‍ಓ ಅವರಿಗೆ ಸೂಚಿಸಿದರು.

IMG 20230704 WA0046


ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೊತಿ ಯೋಜನೆಯಡಿಯಲ್ಲಿ ಜುಲೈ 3ರವರೆಗೆ ತಾಲ್ಲೂಕಿನ 25,508 ಫಲಾನುಭವಿಗಳು ನೊಂದಣಿ ಮಾಡಿಕೊಂಡಿದ್ದಾರೆ ಎಂದು ಬೆಸ್ಕಾಂ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಶಕ್ತಿ ಯೋಜನೆಯಡಿಯಲ್ಲಿ ತಾಲ್ಲೂಕಿನಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿರುವುದರಿಂದ ಪ್ರತಿ ದಿನ 1.5 ಲಕ್ಷ ಆದಾಯ ನಿಗಮಕ್ಕೆ ಬರುತ್ತಿದೆ ಎಂದು ಡಿಪೆÇೀ ಮ್ಯಾನೇಜರ್ ಹೇಳಿದರು.
ತಾಲ್ಲೂಕಿನಲ್ಲಿ 3 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನು, ನಾಲ್ಕು ಚಕ್ರದ ವಾಹನ, 30*40 ವಿಸ್ತೀರ್ಣದ ಜಾಗವನ್ನು ಹೊಂದಿರುವ ಕುಟುಂಬಗಳನ್ನು ಗುರುತಿಸಿ ಇನ್ನು 15 ದಿನಗಳೊಳಗಾಗಿ ಬಿಪಿಎಲ್ ಪಡಿತರ ಚೀಟಿಯನ್ನು ವಿತರಿಸಬೇಕೆಂದು ಆಹಾರ ಇಲಾಖೆಯ ಶಿರಸ್ತೇದಾರ್ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ, ತಹಶೀಲ್ದಾರ್ ಸುಜಾತ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವರಾಜಯ್ಯ, ಕೆಎಸ್‍ಪಿಡಿಸಿಎಲ್‍ನ ಸಿಇಓ ಅಮರನಾಥ್, ಡಿ.ಹೆಚ್.ಓ. ಡಾ. ಮಂಜುನಾಥ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಶ್ ರೆಡ್ಡಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.