IMG 20230723 WA0002

ಮಧುಗಿರಿ: ಬ್ರಹ್ಮ ಸಮುದ್ರ ಗ್ರಾಮ ಪಂಚಾಯಿತಿ ನೂತನ ಸಾರಥಿಗಳ ಆಯ್ಕೆ…!

DISTRICT NEWS ತುಮಕೂರು

*ಬ್ರಹ್ಮ ಸಮುದ್ರ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ*.

ಮಧುಗಿರಿ. ಐ.ಡಿ.ಹಳ್ಳಿ ಹೋಬಳಿ ಬ್ರಹ್ಮಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಎರಡನೇ ಅವಧಿಗೆ ಚುನಾವಣೆ ನಡೆಯಿತು. ಒಟ್ಟು 13 ಜನ ಸದಸ್ಯರಿದ್ದು ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಬೇರೆ ಯಾರೂ ಕೂಡ ನಾಮಪತ್ರ ಸಲ್ಲಿಸದೆ ಇರುವುದರಿಂದ ಚುನಾವಣಾ ಅಧಿಕಾರಿ ಸ್ವಾಮಿ ರವರು ಅಧ್ಯಕ್ಷ ಸ್ಥಾನಕ್ಕೆ ಬಾಲಕ್ಕ ಕೋಂ ಬೆಳೆಗೇರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿತ್ತಣ್ಣ (ಡಿ ಕೆ.ಸಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ
ಗ್ರಾಮ ಪಂಚಾಯಿತಿ ಪಿಡಿಓ ರವರಾದ ಬೋರಣ್ಣ ಬ್ರಹ್ಮ ಸಮುದ್ರಗ್ರಾಮ ಪಂಚಾಯತಿಯ ಎಲ್ಲಾ ಕಾಂಗ್ರೆಸ್ ಮುಖಂಡರುಗಳು ಹಾಜರಿದ್ದರು.

ವರದಿ. ಲಕ್ಷ್ಮಿಪತಿ ದೊಡ್ಡ ಯ ಲ್ಕೂರು