IMG 20230731 WA0036

ಪೆKarnataka : ರಿಫೆರಲ್ ರಿಂಗ್ ರಸ್ತೆ ನಿಲ್ಲಿಸಲು ಆಗುವುದಿಲ್ಲ….!

Genaral STATE

*ಪಿಆರ್ ಆರ್ ಯೋಜನೆ ನಿಲ್ಲಿಸಲು ಆಗುವುದಿಲ್ಲ, ಆದರೆ ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:*

“ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ ಆಲಿಸಿ, ಅವರ ಸಲಹೆ ಮತ್ತು ಅಭಿಪ್ರಾಯ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;

“ಜಮೀನು ಉಳಿಸಿಕೊಳ್ಳಬೇಕು, ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು.

ಇಂದಿನ ಸಭೆಯಲ್ಲಿ ನೀವು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದೀರಿ. ಕಾಲಮಿತಿಯಲ್ಲಿ ಯೋಜನೆ ಜಾರಿ, ಪರ್ಯಾಯ ಭೂಮಿ ಹಂಚಿಕೆ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಎನ್ ಓ ಸಿ ನೀಡಬೇಕು, ಬದಲಿ ನಿವೇಶನ ನೀಡುವ ಬಗ್ಗೆ ಸಲಹೆ ನೀಡಿದ್ದೀರಿ.

ನಾನು ಸ್ವಾಧೀನ ಆಗಿರುವ ಭೂಮಿ ಎನ್ ಓ ಸಿ ನೀಡಲು ಸಾಧ್ಯವಿಲ್ಲ. ಅದನ್ನು ನೇರವಾಗಿ ನಿಮಗೆ ಸ್ಪಷ್ಟಪಡಿಸುತ್ತೇನೆ.

ನಾನು ಈ ಯೋಜನೆ ನಿಲ್ಲಿಸಲು ಆಗುವುದಿಲ್ಲ. ಆದರೆ ಯಾವ ರೀತಿ ನಿಮ್ಮ ಹಿತ ಕಾಯಬೇಕು, ಯಾವ ರೀತಿ ನಿಮಗೆ ಹೆಚ್ಚಿನ ಅನುಕೂಲ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.ರಸ್ತೆಯೂ ಆಗಬೇಕು, ನಿಮಗೂ ನ್ಯಾಯ ಒದಗಿಸಬೇಕು ಎಂಬುದು ನನ್ನ ಉದ್ದೇಶ.

ನೀವು ಕೊಟ್ಟಿರುವ ಅಮೂಲ್ಯ ಸಲಹೆಗಳನ್ನು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಈ ವಿಚಾರವಾಗಿ ತೀರ್ಮಾನ ಮಾಡಲಾಗುವುದು.

ನಾನು ನಿಮ್ಮ ಜತೆ ಇದ್ದೇನೆ. ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ.ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2007ರಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಲೇ ಈ ರಸ್ತೆ ನಿರ್ಮಾಣ ಆಗಿದ್ದಾರೆ ನಮಗೆ ಇಷ್ಟು ಹೊರೆ ಆಗುತ್ತಿರಲಿಲ್ಲ.

ನ್ಯಾಯಾಲಯದಲ್ಲಿ ಈ ಯೋಜನೆ ವಿಚಾರಣೆ ಆಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಆದೇಶ ಬಂದಿದೆ.ಬಿಡಿಎಗೆ ಹೊಸ ಭೂಸ್ವಾಧೀನ ಕಾನೂನು ಅನ್ವಯ ಆಗುವುದಿಲ್ಲ. ಬಿಡಿಎ ಹಳೆ ಕಾನೂನಿನ ಪ್ರಕಾರ ಭೂಸ್ವಾಧೀನ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.

ನಮ್ಮ ಸರ್ಕಾರ ಹೊಸ ಭೂಮಿಗೆ ಅಧಿಸೂಚನೆ ಹೊರಡಿಸುವ ಪರಿಸ್ಥಿತಿಯಲ್ಲಿ ಇಲ್ಲ.ನನ್ನ ಜಮೀನು ಕೂಡ ಭೂ ಸ್ವಾಧೀನ ಆಗುತ್ತಿದೆ. ಈ ಸಮಯದಲ್ಲಿ ನೋಟಿಫಿಕೇಶನ್ ಆಗಿರುವ ಜಮೀನುಗಳನ್ನು ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ.

ಒಂದುವೇಳೆ ಮಾಡಿದರೆ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ. ರೈತನಿಗೆ ಸಹಾಯ ಮಾಡಬೇಕು ಎಂಬುದು ನಮ್ಮ ಆಸೆ.

IMG 20230731 WA0035

ಈ ಯೋಜನೆಗೆ 25 ಸಾವಿರ ಕೋಟಿ ಅಗತ್ಯವಿದೆ. ಈ ಯೋಜನೆ ಆದರೆ ಸುತ್ತಮುತ್ತಲ ಜಮೀನು ಬೆಲೆ 5 ಪಟ್ಟು ಹೆಚ್ಚಾಗಲಿದೆ.

ಇನ್ನು ನಾವು ಈ ಯೋಜನೆ ತಳ್ಳಿಕೊಂಡು ಹೋಗಲು ಆಗುವುದಿಲ್ಲ.ಇದಕ್ಕಾಗಿ ರೈತರಿಂದಲೇ ಅವರ ಸಮಸ್ಯೆ ಅರಿತು, ಅವರ ಸಲಹೆ ಮತ್ತು ಅಭಿಪ್ರಾಯ ಪಡೆಯಲು, ಪರಿಹಾರ ಇದ್ದಾರೆ ಅದನ್ನು ಪಡೆಯಲು ಈ ಸಭೆ ಮಾಡಿದ್ದೇನೆ.

ನಿಮ್ಮ ಪರಿಸ್ಥಿತಿ ನಾನು ಅರಿತಿದ್ದೇನೆ. ನೀವು ನನ್ನ ಸ್ಥಾನದಲ್ಲಿ ನಿಂತು ಈ ವಿಚಾರದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂದು ಸಲಹೆ ನೀಡಿ.”

*ರೈತರು/ ಭೂಮಾಲೀಕರ ಸಲಹೆಗಳು:*

ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಉನ್ನತ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ನಮ್ಮ ಬಳಿ ಹಣವಿಲ್ಲ. ನಮ್ಮ ಪರವಾಗಿ ಸರ್ಕಾರವೇ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಇಲ್ಲದಿದ್ದರೆ 2013ರಲ್ಲಿ ಜಾರಿಗೆ ತಂದ ಕಾಯ್ದೆಯಂತೆ ಪರಿಹಾರ ನೀಡಿ.

ಕಾನೂನು ಹೋರಾಟಕ್ಕೆ ಹೋದರೆ ಮತ್ತೆ ಕಾಲಹರಣ ಆಗುತ್ತದೆ. ಸರ್ಕಾರವೇ ಇನ್ನು ಐದು ಸಾವಿರ ಕೋಟಿ ಹೆಚ್ಚು ಹಣ ಹಾಕಿ ಭೂಮಿ ಕಳೆದುಕೊಳ್ಳುವವರಿಗೆ ಹೆಚ್ಚಿನ ಪರಿಹಾರ ನೀಡಬೇಕು.

ಸುಪ್ರೀಂ ಕೋರ್ಟ್ ತೀರ್ಪು ರೈತರ ಹಿತಕ್ಕೆ ವಿರುದ್ಧವಾಗಿದ್ದು, ಸರ್ಕಾರ ಸುಗ್ರೀವಾಜ್ಞೆ ಮೂಲಕ ಇದನ್ನು ಪಕ್ಕಕ್ಕಿಟ್ಟು ರೈತರಿಗೆ 2013ರ ಕಾಯ್ದೆ ಅನ್ವಯ ಪರಿಹಾರ ಹಣ ನೀಡಬೇಕು.

IMG 20230731 WA0034

ಬಿಡಿಎ ಪರವಾಗಿ ಬಂದಿರುವ ತೀರ್ಪು ಬಿಡಿಎ vs ಸರ್ಕಾರದ ಪ್ರಕರಣವಾಗಿದ್ದು, ಯಾವುದೇ ರೈತರು ಈ ವಿಚಾರಣೆಯಲ್ಲಿ ಅರ್ಜಿದಾರರಾಗಿಲ್ಲ. ಹೀಗಾಗಿ ಈ ತೀರ್ಪು ಪಕ್ಕಕ್ಕೆ ಇಟ್ಟು ರೈತರಿಗೆ ನೆರವಾಗಬೇಕು.

ಈ ರಸ್ತೆಗೆ ನಮ್ಮ ಜಮೀನು ಸ್ವಾಧೀನ ಆಗಿದ್ದು ಉಳಿದ 2-3 ಗುಂಟೆ ಜಮೀನು ಮಾತ್ರ ಉಳಿದಿದೆ. ಇದನ್ನು ಭೂ ಪರಿವರ್ತನೆ ಮಾಡಲು ಅರ್ಜಿ ಹಾಕಿದರೂ ಸಾಧ್ಯವಾಗುತ್ತಿಲ್ಲ. ನಮಗೆ ಹಳೆ ಪರಿಹಾರಕ್ಕಿಂತ ಅದೇ ಗ್ರಾಮದಲ್ಲಿ ಬದಲು ಜಮೀನು ಕೊಡಿಸಿ.

ಈಗಿನ ಪರಿಸ್ಥಿತಿಯಲ್ಲಿ ಈ ಯೋಜನೆ ಅವಶ್ಯಕತೆ ಇದೆ. ಆದರೆ ಈ ಯೋಜನೆಯಲ್ಲಿ ಪರಿಹಾರ ನೀಡುವುದರಲ್ಲಿ ರೈತರಿಗೆ ಅನ್ಯಾಯ ಆಗುತ್ತಿದೆ. ಈ ಬಗ್ಗೆ ಸರ್ಕಾರ ಉತ್ತಮ ರೀತಿಯಲ್ಲಿ ತೀರ್ಮಾನ ಮಾಡಬೇಕು.

ಈ ಯೋಜನೆಯಲ್ಲಿ ಜಮೀನು ಕಳೆದುಕೊಳ್ಳುವ ನಮಗೆ ಸುತ್ತಮುತ್ತಲ ಹಳ್ಳಿಗಳಲ್ಲಿರುವ ಸರ್ಕಾರಿ ಜಮೀನನ್ನು ಬದಲಿಯಾಗಿ ನೀಡಿ. ಆಗ ನಾವು ಅಲ್ಲೇ ವ್ಯವಸಾಯ ಮಾಡಿಕೊಂಡು ಹೋಗುತ್ತೇವೆ.

ಕಳೆದ 15 ವರ್ಷಗಳಿಂದ ಮನೆ ಕಟ್ಟಬೇಕಾ ಬೇಡವೇ ಎಂಬ ಗೊಂದಲದಲ್ಲಿ ಇದ್ದೇವೆ? ನಮಗೆ ಬೇರೆ ಬದಲಿ ನಿವೇಶನ ನೀಡಬೇಕು.

ಯಾವುದೇ ಯೋಜನೆ ನೋಟಿಫಿಕೇಶನ್ ಆದ ನಂತರ 5 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಆಗದಿದ್ದರೆ ಆ ನೋಟಿಫಿಕೇಶನ್ ಕೈಬಿಡಬೇಕು ಎಂಬ ಕಾನೂನು ಇದೆ. ಹೀಗಾಗಿ ನಮಗೆ ಎನ್ ಓ ಸಿ ನೀಡಬೇಕು.

ಈ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನಮಗೆ ಈ ತ್ರಿಶಂಕು ಸ್ಥಿತಿಯಿಂದ ಹೊರಗೆ ತಂದು ನಿರಾಳತೆ ನೀಡಬೇಕು.

ಸರ್ಕಾರ ನೀಡುವ ಪುಡಿಗಾಸು ಪರಿಹಾರದಲ್ಲಿ ನಾವು ಬೇರೆ ಕಡೆ ಜಮೀನು ಖರೀದಿಸಲು ಆಗುವುದಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ಇರುವ ಗೋಮಾಳ ಜಮೀನನ್ನು ನಮಗೆ ನೀಡಬೇಕು.

ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಸಿಗಬೇಕಾದರೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಬೇಕು. ಅದಕ್ಕೆ ಕ್ರಮ ಕೈಗೊಳ್ಳಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.