ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಸ್ಪೆಷಲ್ ಬಸ್ ಟ್ರಿಪ್ ಮಾಡಲಾಗುವುದು. ಶಾಸಕ ಹೆಚ್ .ವಿ ವೆಂಕಟೇಶ್.
ಪಾವಗಡ : ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿನಿಯರು ವಸತಿ ನಿಲಯಗಳಿಗೆ ಹೋಗಲು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಬಳಿ ಮಾತನಾಡಿ ಸರ್ಕಾರಿ ಬಸ್ಸಿನ ಸ್ಪೆಷಲ್ ಟ್ರಿಪನ್ನು ಕುರುಬರಹಳ್ಳಿ ಗೇಟಿನಿಂದ ಚಳ್ಳಕೆರೆ ಕ್ರಾಸ್ ವರೆಗೆ ಹೋಗಲು ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ ಉನ್ನತ ಜೀವನ ರೂಪಿಸಿಕೊಳ್ಳಬೇಕೆಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ನಮ್ಮ ಮಣ್ಣು ನಮ್ಮ ದೇಶ, ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನ ಸರ್ಕಾರಿ ಶಾಲೆಗಳ ಕೊಠಡಿಗಳ ಸಮಸ್ಯೆಯ ಬಗ್ಗೆ ಹಾಗೂ ಹಾಸ್ಟೆಲ್ ವ್ಯವಸ್ಥೆಗಳ ಬಗ್ಗೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಬೇಕು, ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಕಾರ್ಯಕ್ರಮ ಉದ್ದೇಶಿಸಿ ತಹಶೀಲ್ದಾರ್ ವರದರಾಜು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಮೇರಿ ಮಿಟ್ಟಿ ಮೇರಾ ದೇಶ್ ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ರಾಮ ಪಂಚಾಯಿತಿಯಿಂದ ಮಣ್ಣು ಸಂಗ್ರಹಿಸಿ ತಾಲೂಕು ಕೇಂದ್ರದ ಮೂಲಕ ಜಿಲ್ಲಾ ಕೇಂದ್ರಕ್ಕೆ ಕಳಿಸುವ ಯೋಜನೆ ಇದಾಗಿದೆ ಎಂದರು.
ನಂತರ ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರು ಹಾಗೂ ಶಾಲಾ ಮಕ್ಕಳಿಂದ ಪಂಚ ವೃಕ್ಷ ಪ್ರತಿಜ್ಞಾವಿಧಿ ಬೋಧನೆಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಪಿ ಹೆಚ್ ರಾಜೇಶ್ , ರವಿ , ಪುರಸಭಾ ಮಾಜಿ ಅಧ್ಯಕ್ಷ ಶಂಕರ್ ರೆಡ್ಡಿ ಯುವ ಮುಖಂಡ ನಾನಿ ,ಗುಟ್ಟಹಳ್ಳಿ ಅಂಜಪ್ಪ,,ಗೊರ್ತಿ ನಾಗರಾಜ್ , ಮೈಲಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವಲಿಂಗಪ್ಪ, ಮುಖ್ಯೋಪಾಧ್ಯಾಯರಾದ ಧನಂಜಯ ಒ ,ಕಂದಾಯ ಇಲಾಖೆಯ ಅಧಿಕಾರಿಗಳು, ಇನ್ನೂ ಮುಂತಾದವರು ಉಪಸ್ಥಿತರಿದ್ದರು..