ಮಕ್ಕಳ ಭವಿಷ್ಯ ರೂಪಿಸುವುದರಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಸಕ ಹೆಚ್ ವಿ ವೆಂಕಟೇಶ್.
ಪಾವಗಡ : ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಶಾಸಕ ಹೆಚ್ ವಿ ವೆಂಕಟೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಾಲ್ಲೂಕಿನ ದೊಡ್ಡಹಳ್ಳಿ ಗ್ರಾಮ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಸೋಮವಾರ ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶಾಸಕ ಹೆಚ್ ವಿ ವೆಂಕಟೇಶ್ ಮಾತನಾಡಿದರು.
ಸಮಾಜದಲ್ಲಿನ ಅನೇಕ ಸಾಮಾಜಿಕ ಸಮಸ್ಯೆಗಳಿಗೆ ಶಿಕ್ಷಣ ಒಂದೇ ಪರಿಹಾರವೆಂದು. ತಾಲ್ಲೂಕಿನಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಿ ಶಾಲೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಗಮನ ಕೊಡುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ತಿರುಪತಯ್ಯ ಪುರಸಭಾ ಸದಸ್ಯರಾದ ರಾಜೇಶ್, ರವಿ , ಯುವ ಮುಖಂಡರಾದ ಬತ್ತಿನೇನಿ ನಾನಿ , ಪುರಸಭೆಯ ಮುಖ್ಯಾಧಿಕಾರಿ ಶಂಷುದ್ದೀನ್, , ಶಾಲೆಯ ಪ್ರಾಂಶುಪಾಲರದ ಕಸ್ತೂರಿ ಕುಮಾರ್ ,ಶಿಕ್ಷಕ ಮಾರುತಿ ಇನ್ನೂ ಮುಂತಾದವರು ಹಾಜರಿದ್ದರು.