IMG 20230815 WA0050

Karnataka : ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಆರಂಭ – 130 ತಾಲ್ಲೂಕು ಬರ ದ ಛಾಯೆ…!

Genaral STATE

*ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ*

ರಾಜ್ಯದಲ್ಲಿ *ಅನಧಿಕೃತವಾಗಿ ಲೋಡ್ ಶೆಡ್ಡಿಂಗ್* ಶುರುವಾಗಿದೆ ಎಂದು ಕಿಡಿ
ಕಾವೇರಿ ವಿಷಯದಲ್ಲಿ ಸರಕಾರ ತಪ್ಪು ಮಾಡಿದ ಎಂದು ಆಕ್ರೋಶ
***
ಹಾಸನ: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ, ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹಾಸನಕ್ಕೆ ಇಂದು ಭೇಟಿ ನೀಡಿದ್ದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ವಿಜ್ಞಾನಿಗಳ ಅವಿರತ ಶ್ರಮದಿಂದ ದೇಶದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಇವತ್ತು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಹೋಗಿದ್ದಾರೆ. ಹೀಗಾಗಿ ರಾಜಕಾರಣ ಬಗ್ಗೆ ಹೆಚ್ಚಿಗೆ ಚರ್ಚೆ ಮಾಡಲು ಹೋಗಲ್ಲ. ನೀವು ಸರಕಾರದ ಬಗ್ಗೆ ಕಠಿಣವಾಗಿ ಮಾತನಾಡುವುದು ಬೇಡ, ಇವರು ತಪ್ಪುಗಳನ್ನು ಮಾಡಿಕೊಂಡು ಹೋಗಲಿ ಬಿಟ್ಟು ಬಿಡಿ ಎಂದು ಬಹಳಷ್ಟು ಜನ ಹೇಳುತ್ತಿದ್ದಾರೆ. ಹಾಗಂತ ಬಿಟ್ಟುಬಿಟ್ಟರೆ ಇವರಿಗೆ ಹೇಳೋರು ಕೇಳೋರು ಇರುವುದಿಲ್ಲ, ಆ ಪರಿಸ್ಥಿತಿಗೆ ಬಂದು ಬಿಡ್ತಾರೆ. ಈಗಲೇ ಹೇಳೋರು, ಕೇಳೋರು ಇಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.*

ಅನಧಿಕೃತವಾಗಿ ಲೋಡ್ ಶೆಡ್ಡಿಂಗ್:*

ನಾನು ಸರಕಾರಕ್ಕೆ ಹೇಳುವುದು ಇಷ್ಟೇ. ನಿಮ್ಮ‌ ಗ್ಯಾರಂಟಿ ಸ್ಕೀಂಗಳನ್ನು ಮಾಡಿಕೊಂಡು ಹೋಗಿ, ಸಂತೋಷ. ಅದು ಎಷ್ಟರಮಟ್ಟಿಗೆ ನಿಮ್ಮ ಗ್ಯಾರಂಟಿ ಸ್ಕೀಂಗಳಿಂದ ಇಡೀ ನಾಡಿನ ಜನತೆಗೆ ಅನೂಕೂಲ ಆಗುತ್ತಿದೆ ಎಂಬುದನ್ನು ಕಾದು ನೋಡೋಣ. ಅದಾನಿ, ಅಂಬಾನಿಗೆ ಸೇರುವ ದುಡ್ಡನ್ನು ಪ್ರತಿಯೊಬ್ಬರಿಗೂ ಹಂಚುತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದ್ಯಾರಿಗೆ ಹಂಚುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಗೃಹಜ್ಯೋತಿ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುವುದುನ್ನು ಪ್ರತಿನಿತ್ಯ ಕಾಣುತ್ತಿದ್ದೇವೆ. ಈಗಾಗಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಮಂತ್ರಿಗಳು ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಯಾವ ಸಮಯದಲ್ಲಿ ವಿದ್ಯುತ್ ಕೊಡುತ್ತಾರೆ ಎಂದು ಹಳ್ಳಿ‌ಜನ ಕಾಯುತ್ತಾ ಕೂರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಸರಕರಾಕ್ಕೆ ಚಾಟಿ ಬೀಸಿದರು.

ಅನಧಿಕೃತ ಲೋಡ್ ಶೆಡ್ಡಿಂಗ್ʼಗೆ ಯಾವುದೇ ರೀತಿಯ ಸಿದ್ದತೆಗಳಿಲ್ಲ, ಮುಂದೆ ಆಗುವ ಸಮಸ್ಯೆಗಳ ಬಗ್ಗೆ ಚಿಂತನೆಯೂ ಇಲ್ಲ. ಮೊದಲು ರೈತರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಯೋಚನೆ ಮಾಡಬೇಕಿತ್ತು ಇವರು. 130 ತಾಲ್ಲೂಕುಗಳಲ್ಲಿ ಬರದ ಛಾಯೆ ಮೂಡಿದೆ ಅಂತ ಕೃಷಿಮಂತ್ರಿಗಳೇ ಹೇಳೀದ್ದಾರೆ. ಭಿತ್ತನೆ ಸಂಪೂರ್ಣ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗ್ಯಾರೆಂಟಿ ಎಂದು ವಿಜೃಂಭಿಸುವುದನ್ನು ಬಿಟ್ಟು ಮೊದಲು ರೈತರ ಬದುಕು ಏನಾಗಿದೆ ಎಂಬುದನ್ನು ನೋಡಲಿ ಎಂದು ಅವರು ಒತ್ತಾಯ ಮಾಡಿದರು.

*ಕಾವೇರಿ: ನಮ್ಮ ರೈತರ ಹಿತ ರಕ್ಷಿಸಿ*

ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ನಮ್ಮ ರೈತರ ಹಿತ ಕಡೆಗಣಿಸಿದೆ. ಸರ್ವಪಕ್ಷದ ಸಭೆಯಲ್ಲೂ‌ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯವನ್ನು ನೇರವಾಗಿ ಹೇಳಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದಾಗಲೇ ಸರ್ವಪಕ್ಷದ ಸಭೆ ಕರೆದು ಚರ್ಚೆ ಮಾಡಬೇಕಿತ್ತು. ಸುಪ್ರೀಂ ಕೋರ್ಟ್‌ಗೆ ತಮಿಳುನಾಡಿನವರು ಅರ್ಜಿ ಹಾಕಿಕೊಂಡಾಗ ತೀರ್ಪು ಬರುವವರೆಗೂ ಕಾಯಬೇಕಿತ್ತು. ಏಕಾಏಕಿ ನೀರು ಬಿಟ್ಟುಬಿಟ್ಟರು, ನಂತರ ರೈತರು ಪ್ರತಿಭಟನೆ ಮಾಡಲು ಹೋದಾಗ ʼನೀವು ಕೋರ್ಟ್‌ಗೆ ಕೇಸ್ ಹಾಕಿಕೊಳ್ಳಿʼ ಎಂದು ಉಪ ಮುಖ್ಯಮಂತ್ರಿ ಹೇಳಿದರು. ಇಂಥ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ ಎಂದು ಸಭೆಯಲ್ಲಿ ನೇರವಾಗಿಯೇ ಹೇಳಿದ್ದೇನೆ ಎಂದರು ಕುಮಾರಸ್ವಾಮಿ ಅವರು.