IMG 20230902 WA0015

ಬಿಜೆಪಿ : ರೈತ‌ಮೋರ್ಚಾ ದಿಂದ ಪ್ರತಿಭಟನೆ…..!

Genaral STATE

ಸೆಪ್ಟೆಂಬರ್ 8ರಂದು ರೈತಮೋರ್ಚಾ ಪ್ರತಿಭಟನೆ- ಈರಣ್ಣ ಕಡಾಡಿ

ಬೆಂಗಳೂರು: ರೈತಪರ ಯೋಜನೆಗಳ ಮುಂದುವರಿಕೆ ಮತ್ತು ಸಮರ್ಪಕ ವಿದ್ಯುತ್ ಕೊಡಲು ಆಗ್ರಹಿಸಿ ರಾಜ್ಯದಾದ್ಯಂತ ತಹಸೀಲ್ದಾರ್ ಕಚೇರಿಗಳ ಮುಂದೆ ಸೆಪ್ಟೆಂಬರ್ 8ರಂದು ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಎಚ್ಚರಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಕೊಡಬೇಕು. ಬರ ನಿರ್ವಹಣೆಗೆ ಸಮರ್ಪಕವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬರ ನಿರ್ವಹಿಸಲು ಯುದ್ಧೋಪಾದಿ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದರು. ಗ್ಯಾರಂಟಿ ಕಾರಣಕ್ಕಾಗಿ ರೈತಪರ ಯೋಜನೆಗಳನ್ನು ನಿಲ್ಲಿಸದಿರಿ ಎಂದು ಅವರು ತಿಳಿಸಿದರು.
ರೈತರ ಮೇಲೆ ನಿಮಗೇಕೆ ಇಷ್ಟು ದ್ವೇಷ? ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಶೇ 40 ಮಳೆ ಕಡಿಮೆ ಆಗಿದೆ ಎಂದು ವಿವರಿಸಿದರು. ರಾಜ್ಯದ ಎಲ್ಲ ಜಲಾಶಯಗಳಲ್ಲಿ ಕಳೆದ ವರ್ಷದ ಸಂಗ್ರಹ ಗಮನಿಸಿದರೆ ಕಡಿಮೆ ಇದೆ. ನೀರಿನ ಹರಿವು ಕೂಡ ಅತ್ಯಂತ ಕಡಿಮೆ ಇದೆ. ಇದರ ಜೊತೆಗೆ ರೈತರ ಪಂಪ್‍ಸೆಟ್‍ಗಳಿಗೆ ಹಗಲು 7 ಗಂಟೆ ವಿದ್ಯುತ್ ಕೊಡಲಾಗುತ್ತಿತ್ತು. ಈಗ ಒಂದು ತಿಂಗಳಿನಿಂದ 4 ಗಂಟೆಯೂ ಭಾಗವಹಿಸಿದ್ವಿದರುದ್ಯುತ್ ಸಿಗುತ್ತಿಲ್ಲ. ರಾತ್ರಿ ಹೊತ್ತಿನಲ್ಲಿ ಉಪಯೋಗ ಕಷ್ಟಸಾಧ್ಯ ಪರಿಸ್ಥಿತಿ ಇದೆ.
ಅಣೆಕಟ್ಟಿನ ನೀರು ಉಪಯೋಗ ಸಾಧ್ಯವಾಗಿಲ್ಲ. ಇದೆಲ್ಲದರ ಜೊತೆಗೆ ರೈತರಿಗೆ ಧೈರ್ಯ ತುಂಬಬೇಕಾದ ಸರಕಾರವು ಬಿಜೆಪಿ ಮೇಲಿನ ದ್ವೇಷದ ಕಾರಣ ಪರೋಕ್ಷವಾಗಿ ರೈತರನ್ನು ದ್ವೇಷಿಸುತ್ತಿದೆ. ಕೇಂದ್ರ ಘೋಷಿಸಿದ ಕಿಸಾನ್ ಸಮ್ಮಾನ್ ನಿಧಿಯಡಿ ರಾಜ್ಯ ಸರಕಾರ ಕೊಡುವ 4 ಸಾವಿರ ಮೊತ್ತವನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದ 50 ಲಕ್ಷ ರೈತ ಕುಟುಂಬಗಳಿಗೆ ಹೊಡೆತ ಬಿದ್ದಿದೆ.
11 ಲಕ್ಷ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ 438 ಕೋಟಿ ರೂ. ಗಳನ್ನು ನೀಡಿದ್ದು, ಅದು ಸ್ಥಗಿತವಾಗಿದೆ. ಭೂಸಿರಿ ಯೋಜನೆ ನಿಲ್ಲಿಸಿದ್ದಾರೆ. ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಶ್ರಮಶಕ್ತಿ ಯೋಜನೆಯಡಿ 500 ರೂ ಕೊಡುತ್ತಿದ್ದು, ಅದನ್ನು ನಿಲ್ಲಿಸಲಾಗಿದೆ. ರೈತಸಂಪದ ಯೋಜನೆ ಮೊತ್ತವನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ. ಜಿಲ್ಲಾ ಗೋಶಾಲೆ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ. ಯಾರನ್ನೋ ತುಷ್ಟೀಕರಣಕ್ಕಾಗಿ ಹೀಗೆ ಮಾಡಿದ್ದಾರೆ.
ರೈತರ ಬೆಳೆ ಎಲ್ಲಿ ಬೇಕೋ ಅಲ್ಲಿ ಮಾರಾಟ ಮಾಡುವ ಪ್ರಯತ್ನ ಮಾಡಿದ್ದರು. ದಲ್ಲಾಳಿಗಳ ಹಿತರಕ್ಷಣೆಗೆ ಸರಕಾರ ಮುಂದಾಗುತ್ತಿದೆ ಎಂದು ಟೀಕಿಸಿದ ಅವರು, ಕೃಷಿ ಮಾಡದವರೂ ಕೃಷಿ ಜಮೀನು ಕೊಳ್ಳಲು ಅವಕಾಶ ನೀಡಿದ್ದೆವು. ಅದನ್ನು ಕೂಡ ತಡೆಹಿಡಿದಿದ್ದಾರೆ. ಇದರಿಂದ ರೈತರಿಗೆ ಹಾನಿ ಆಗಿದೆ.
25 ಲಕ್ಷ ಕುಟುಂಬದವರು ಹೈನುಗಾರಿಕೆ ಉಪಕಸುಬಿನಲ್ಲಿ ತೊಡಗಿದ್ದರು. ಅವರಿಗಾಗಿ ಆರಂಭಿಸಲು ಉದ್ದೇಶಿಸಿದ ಕ್ಷೀರ ಸಮೃದ್ಧಿ ಬ್ಯಾಂಕ್ ಕೂಡ ತಡೆಹಿಡಿಯಲಾಗಿದೆ. ಈ ಬ್ಯಾಂಕಿಗೆ ಸಾವಿರ ಕೋಟಿ ನೀಡಲು ಉದ್ದೇಶಿಸಲಾಗಿತ್ತು. ಈ ಮೂಲಕ ಕಾಂಗ್ರೆಸ್ ಸರಕಾರ ರೈತವಿರೋಧಿ ಎನಿಸಿದೆ. ಯಾಕೆ ನೀವು ರಾಜಕಾರಣ ಮಾಡಲು ರೈತ ದ್ವೇಷಿ ಆಗಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಕಳೆದ 100 ದಿನಗಳ ಆಡಳಿತಾವಧಿಯಲ್ಲಿ 42ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು. ಈ ವಿಷಯದಲ್ಲೂ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿದರು. ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ರಾಜ್ಯ ಉಪಾಧ್ಯಕ್ಷರಾದ ಲೋಕೇಶ್ ಗೌಡ, ಮಂಜುಳಾ, ಕಾರ್ಯಾಲಯ ಕಾರ್ಯದರ್ಶಿ ಶಶಿಕುಮಾರ್ ಗುತ್ತನವರ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.