IMG 20230913 WA0042

ಲೋಕಾಯುಕ್ತ: ಅಧಿಕಾರಿಗಳು ಸಾರ್ವಜನಿಕರ ಬಳಿ ಸೌಜನ್ಯದಿಂದ ವರ್ತಿಸಿ….!

DISTRICT NEWS ತುಮಕೂರು

ಅಧಿಕಾರಿಗಳು ಸಾರ್ವಜನಿಕರ ಬಳಿ ಸೌಜನ್ಯದಿಂದ ವರ್ತಿಸಿ: ಲೋಕಾಯುಕ್ತ ಡಿ.ವೈ.ಎಸ್ಪಿ ಜಿ ಮಂಜುನಾಥ್.
ಪಾವಗಡ : ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಂದ ಅಹವಾಲನ್ನು ಸ್ವೀಕರಿಸಬೇಕು, ಕಾನೂನಿನ ಪ್ರಕಾರ ಕೆಲಸ ಆಗದೆ ಇದ್ದಲ್ಲಿ ಅವರಿಗೆ ಮನವರಿಕೆ ಮಾಡಬೇಕೆಂದು ಡಿವೈಎಸ್ಪಿ ಜಿ ಮಂಜುನಾಥ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ
ತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸರ್ಕಾರಿ ಇಲಾಖೆಯ ಸಿಬ್ಬಂದಿ ಜನರೊಂದಿಗೆ ಸರಿಯಾಗಿ ಸ್ಪಂಧಿಸದಿದ್ದಲ್ಲಿ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣವಾಗಲಿದ್ದು, ಎಲ್ಲರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕೆಲಸಗಳನ್ನು ಸೂಕ್ತ ಸಮಯದಲ್ಲಿ ಮಾಡಿಕೊಡಬೇಕೆಂದು ತಿಳಿಸಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ 04 ದೂರಿನ ಅರ್ಜಿಗಳು, ಪುರಸಭೆಗೆ ಸಂಬಂಧಿಸಿದ 03 ದೂರಿನ ಅರ್ಜಿಗಳು ತಾಲೂಕು ಪಂಚಾಯಿತಿಗೆ ಸಂಬಂಧಿಸಿದಂತೆ 05 ದೂರಿನ ಅರ್ಜಿಗಳು,
ಒಟ್ಟು 12 ದೂರಿನ ಅರ್ಜಿಗಳು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮಹಮ್ಮದ್ ಸಲೀಮ್, ತಹಶೀಲ್ದಾರ್ ವರದರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಜಾನಕಿ ರಾಮ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು