IMG 20230925 WA0029

ಆನೇಕಲ್: ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು….!

DISTRICT NEWS ಬೆಂಗಳೂರು

ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು: ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್

ಬೆಂಗಳೂರು ನಗರ ಜಿಲ್ಲೆ ಸೆ.25 ( ಕರ್ನಾಟಕ ವಾರ್ತೆ ) :- ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು ಮಾಡಲಾಗುವುದು ಹಾಗೂ ಇದರ ಸಂಬಂಧವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾನ್ಯ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಕೆ ಶಿವಕುಮಾರ್ ಭರವಸೆ ನೀಡಿದರು.

ಅವರು ಇಂದು ಆನೇಕಲ್ ಪಟ್ಟಣದ ಹೊಸ ಮಧ್ಯಮಿಕ್ ಪಾಠ ಶಾಲೆ ಆಟದ ಮೈದಾನದಲ್ಲಿ ಜಿಲ್ಲಾಧಿಕಾರಿ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 ಆನೇಕಲ್‌ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲು ಶಾಸಕರು ಮತ್ತು ಸಂಸದರು ಮನವಿ ಮಾಡಿದ್ದು . ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು ಪೂರೈಕೆ ಮಾಡಲಾಗುವುದು ಎಂದರು.

ಜನತಾ ದರ್ಶನದಲ್ಲಿ ಸರ್ವಜನಿಕರು ನೀಡಿರುವ ಎಲ್ಲಾ ಅರ್ಜಿಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಆನೇಕಲ್‌ಗೆ ವಕೀಲ ಸಂಘದ ವತಿಯಿಂದ ಬೇಡಿಕೆಯನ್ನು ಸಲ್ಲಿಸಿದ್ದು ಎಸಿ ಕೋರ್ಟ್‌ ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಾಗುವುದು ಎಂದು ಭರವಸೆ ನೀಡಿದರು.

IMG 20230925 WA0028

ಸಂಸದರಾದ ಡಿ.ಕೆ.ಸುರೇಶ್‌ ಮಾತನಾಡಿ ಆನೇಕಲ್‌ ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ತಾಲ್ಲೂಕಿನ ಎಲ್ಲಾ ಭಾಗಗಳಿಗೂ ಕಾವೇರಿ ನೀರು ಪೂರೈಕೆಗೆ ಡಿಪಿಆರ್ ಮಾಡಲಾಗಿದೆ. ಉಪಮುಖ್ಯಮಂತ್ರಿಗಳು ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದರು.

ಆನೇಕಲ್ ಶಾಸಕರಾದ ಬಿ.ಶಿವಣ್ಣ ಮಾತನಾಡಿ ಆನೇಕಲ್‌ ತಾಲ್ಲೂಕಿನ ಬೊಮ್ಮಸಂದ್ರದವರೆಗೆ ಮೆಟ್ರೋ ಯೋಜನೆ ಜಾರಿಯಾಗಿದ್ದು . ತಾಲ್ಲೂಕಿನ ಅತ್ತಿಬೆಲೆ, ಸರ್ಜಾಪುರ, ಆನೇಕಲ್‌ಗೆ ಮೆಟ್ರೋ ಯೋಜನೆ ವಿಸ್ತರಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಫಲಾನುಭವಿಗಳಿಗೆ ಸೌಲಭ್ಯ ವಿತರಣೆ : ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಂಕೇತಿಕವಾಗಿ ಸೌಲಭ್ಯಗಳನ್ನು ವಿತರಿಲಾಯಿತು. ಗೃಹ ಲಕ್ಷ್ಮೀ,94ಸಿ ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ, ಹೆಬ್ಬಗೋಡಿ ನಗರಸಭೆ ವತಿಯಿಂದ ಲ್ಯಾಪ್‌ಟಾಪ್‌ ವಿತರಣೆ ಹಾಗೂ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ವಿತರಿಸಲಾಯಿತು.
ಇದೆ ಸಂದರ್ಭದಲ್ಲಿ ಒಟ್ಟು ವಿವಿಧ ಇಲಾಖೆಗಳಿಂದ ಒಟ್ಟು 255 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಮಾರಂಭ ದಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕಾಂತರಾಜು, ಉಪವಿಭಾಗಾಧಿಕಾರಿ ರಜನಿಕಾಂತ್‌, ತಹಶೀಲ್ದಾರ್‌ ಶಶಿಧರ್‌ ಮಾಡ್ಯಾಳ್‌, ಎಎಸ್ಪಿ ಎಂ.ಎಲ್‌.ಪುರುಷೋತ್ತಮ್‌, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್‌ರೆಡ್ಡಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.