50234fea 6566 401a bc1e f40c1c6271d6

ಪಾವಗಡ: ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

DISTRICT NEWS ತುಮಕೂರು

ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಪಾವಗಡ,ಆ.16: ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಿಕೊಂಡು ಅವರು ಆದರ್ಶಗಳನ್ನು ಪಾಲಿಸಿಬೇಕು ಎಂದು ಪ್ರಾಂಶುಪಾಲರಾದ ಓಂಕಾರಪ್ಪ ತಿಳಿಸಿದರು.

ತಾಲ್ಲೂಕಿನ ವೆಂಕಟಾಪುರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜರೋಹಣ ನೆರವೇರಿಸಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹೋರಾಟಗಾರರ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಂಡು ಅಭಿವೃದ್ಧಿಯತ್ತ ಸಾಗಬೇಕು. ತ್ಯಾಗ, ಬಲಿದಾನಗಳ ಫಲವೇ ಸ್ವಾತಂತ್ರ್ಯ ದೊರಕಿದೆ ಎಂದು ತಿಳಿಸಿದರು.