IMG 20200817 160324

ಬೆಂಗಳೂರು ಗಲಭೆ: ಕಿಡಿಗೇಡಿಗಳ ಆಸ್ತಿ ಜಪ್ತಿ…!

STATE Genaral

ಬೆಂಗಳೂರು ಗಲಭೆ: ಕಿಡಿಗೇಡಿಗಳ ಆಸ್ತಿ ಜಪ್ತಿ…!

ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA Act) ಯನ್ನು

ಸಿಲಿಕಾನ್ ಸಿಟಿ ಯ ಡಿ.ಜೆ ಹಳ್ಳಿ,ಕೆ ಜಿ ಹಳ್ಳಿ ಗಲಭೆಯಲ್ಲಿ ಸಾರ್ವಜನಿಕ ರ ಆಸ್ತಿ ಪಾಸ್ತಿ ನಷ್ಟ ಮಾಡಿದ್ದ ಗಲಭೆ ಕೋರ ಆರೋಪಿ ಗಳಿಂದ  ಆಸ್ತಿಗಳನ್ನು  ಜಪ್ತಿ ಮಾಡಿ ನಷ್ಟವನ್ನು ತುಂಬಿಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲಭೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ  ಉನ್ನತ ಮಟ್ಟದ ಸಭೆ ಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಇಂದಿನ ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ತೀರ್ಮಾನಗಳು:

1. ಸಾರ್ವಜನಿಕ ಹಾಗು ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಉಚ್ಛನ್ಯಾಯಾಲಯಕ್ಕೆ. ಮನವಿ ಸಲ್ಲಿಸಿ, ಈಗಾಗಲೇ ನೀಡಲಾಗಿರುವ ದೇಶದ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ‘ಕ್ಲೇಮ್ ಕಮಿಷನರ್’ ನೇಮಿಸಲು ಕೋರುವ ಬಗ್ಗೆ ತೀರ್ಮಾನಿಸಲಾಯಿತು.IMG 20200817 153629

2. ಈ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಉಪಸ್ಥಿತರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಅಲ್ಲದೇ ಈ ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA Act) ಯನ್ನು ಸಹ ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು.

3. ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

4. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ

ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು.

5. ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡುಬಂದಲ್ಲಿ ಗೂಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳಲಾಗುವುದು.

ಸಭೆಯಲ್ಲಿ ಗೃಹ ಸಚಿವ  ಬಸವರಾಜ ಬೊಮ್ಮಾಯಿ,    ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ-ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.