IMG 20231208 WA0041

Karnataka :ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ….!

Genaral STATE

ಕನ್ನಡದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಇತ್ತೀಚೆಗೆ ವಯೋಸಹಜ ಖಾಯಿಲೆ ಯಿಂದ ಬಳಲುತ್ತಿದ್ದರು.

85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ.

1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

ಗಣ್ಯರ ಸಂತಾಪ :

ಮುಖ್ಯಮಂತ್ರಿ ಸಿದ್ದರಾಮಯ್ಯ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

IMG 20231208 WA0043

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಹಿರಿಯ ನಟಿ ಲೀಲಾವತಿ ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ನಟ ವಿನೋದ್ ರಾಜ್ ಅವರ ತಾಯಿ, ಲೀಲಾವತಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಲೀಲಾವತಿ ಅವರು ಕನ್ನಡದಲ್ಲಿ 400, ತಮಿಳಿನಲ್ಲಿ 200 ಚಲನಚಿತ್ರಗಳು ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದರು. ಅವರ ನಿಧನದಿಂದ ಕನ್ನಡ ಸಿನಿಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಲೀಲಾವತಿ ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ನಟಿ ಲೀಲಾವತಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿಯವರು ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಲೀಲಾವತಿ ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ.
ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜಕುಮಾರ್ ಸೇರಿದಂತೆ ಎಲ್ಲ ದಿಗ್ಗಜ ನಟರೊಂದಿಗೆ ವಿಭಿನ್ನ ಪಾತ್ರಗಳನ್ನು ಮಾಡಿ ಎಲ್ಲರ ಮನೆ ಮಾತಾಗಿದ್ದರು.
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

IMG 20231208 WA0034

ಹಿರಿಯ ನಟಿ ಲೀಲಾವತಿ ನೀಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು


ಬೆಂಗಳೂರು: ಕನ್ನಡ ಚಿತ್ರರಂಗದ ಶ್ರೇಷ್ಟ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ ಎಂದಿರುವ ಅವರು; ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಶೋಕ ವ್ಯಕ್ತಪಡಿಸಿದ್ದಾರೆ.