IMG 20231213 WA0018

ಬೆಳಗಾವಿ: ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ….!

Genaral STATE

ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ ಸುವರ್ಣವಿಧಾನಸೌಧ ಡಿ.13: ಯಾದಗಿರಿ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕಾನೂನು ಕ್ರಮ ಬಿಗಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ ಅವರು ಹೇಳಿದರು.
ವಿಧಾನಸಭೆಯಲ್ಲಿ
ಶಾಸಕರಾದ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿಷೇಧಿತ ಬಾಲ್ಯವಿವಾಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಸಹ ಅವರನ್ನು ರಕ್ಷಿಸುವ ಪ್ರಮೆಯೇ ಇಲ್ಲ. ತಪ್ಪಿತಸ್ಥರನ್ನು ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆಯಲ್ಲಿ 2020-2021ರಲ್ಲಿ 1, 2021-22ರಲ್ಲಿ 9 ಹಾಗೂ 2022-23ರಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಬಾಲ್ಯವಿವಾಹ ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ. ಬಾಲ್ಯವಿವಾಹದಿಂದ ಮುಂದೆ ಆಗುವ ದುಷ್ಪರಿಣಾಮಗಳೇನು ಎಂಬುದರ ಬಗ್ಗೆ ಸಾರ್ವಜನಿಕರು ಅರಿಯಬೇಕು. ಕಾನೂನು ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ಮಾಡಿದರು.
ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತಿತರ ಸಂಬಂಧಿಸಿದ ಇಲಾಖೆಗಳಲ್ಲದೇ ಸ್ಟೇಟ್ ಕ್ರೈಮ್ ರೆಕಾರ್ಡ್ ಬ್ಯೂರೋ, ಬಾಲ್ಯ ವಿವಾಹ ನಿಷೇಧ ಕೋಶ ಇತ್ಯಾದಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಇವುಗಳ ಮೇಲುಸ್ತುವಾರಿ ಹಾಗೂ ದಾಖಲಾಗುವ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುತ್ತಿದೆ ಎಂದು ತಿಳಿಸಿದರು.