IMG 20231213 WA0019

ಬೆಳಗಾಂ: ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ…!

Genaral STATE

ವಿದ್ಯಾರ್ಥಿ ವೇತನ ಪಾವತಿಗೆ ಆಯವ್ಯಯದಲ್ಲಿ 105 ಕೋಟಿ ಅನುದಾನ ನಿಗದಿ: ಶಿವರಾಜ ತಂಗಡಗಿ

ಬೆಳಗಾವಿ ಸುವರ್ಣವಿಧಾನಸೌಧ ಡಿ.13: 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲು 40 ಕೋಟಿ ರೂ ಮತ್ತು ರಾಜ್ಯದ ಪಾಲು 65 ಕೋಟಿ ರೂ. ಸೇರಿ 105 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಮಾರ್ಗಸೂಚಿಯನುಸಾರ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
2023-24ನೇ ಸಾಲಿನಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಅರ್ಹ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗುತ್ತಿದೆ ಎಂದು ಸಚಿವರು ಶಾಸಕರಾದ ತಮ್ಮಯ್ಯ ಹೆಚ್ ಡಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಅನುದಾನ ಬಿಡುಗಡೆಗೆ ಕ್ರಮ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಸತಿ ನಿಲಯಗಳ ಕಟ್ಟಡ ನಿರ್ವಹಣೆಗೆ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬೇರೆ ಬೇರೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಪ್ರಸ್ತಾವನೆಗಳ ಬಗ್ಗೆ ಪರಿಶೀಲಿಸಿ ಅನುದಾನ ಲಭ್ಯತೆಯ ಆಧಾರದ ಮೇಲೆ ಹಣ ಬಿಡುಗಡೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
2023-24ನೇ ಸಾಲಿನಲ್ಲಿ ಇಲಾಖೆಯ ಒಟ್ಟು 1203 ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿ ಕಾಮಗಾರಿಗಳನ್ನು 150 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಿದ್ದು ಇವುಗಳಲ್ಲಿ ಬಂಗಾರಪೇಟೆಯ 03 ವಿದ್ಯಾರ್ಥಿ ನಿಲಯ ಕಟ್ಟಡಗಳ ದುರಸ್ತಿ ಕಾಮಗಾರಿಗಳು ಒಳಗೊಂಡಿರುತ್ತವೆ ಎಂದು ಸಚಿವರು, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು.
175 ಕೋಟಿ ಅನುದಾನ: ಸ್ವಂತ ಕಟ್ಟಡಗಳ ನಿರ್ಮಾಣವನ್ನು ಆಯವ್ಯಯದಲ್ಲಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾರ್ಯಕ್ರಮದಡಿ ಒದಗಿಸಲಾಗುತ್ತಿರುವ ಅನುದಾನದಲ್ಲಿ ಕೈಗೊಳ್ಳಲಾಗುತ್ತಿದ್ದು, 2023-24ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳ ಕಟ್ಡಡ ನಿರ್ಮಾಣ ಕಾರ್ಯಕ್ರಮದಡಿ 175 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸಚಿವರು, ಶಾಸಕರಾದ ಚಿಮ್ಮನಕಟ್ಟಿ ಬಿಬಿ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.