IMG 20240103 WA0012

Covid :ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ…!

Genaral STATE

60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ

ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್.

ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ

ಬೆಂಗಳೂರು,ಜ,2-ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ಮಾಡಿದ್ದಾರೆ.

ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ದತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ರೂಪಾಂತರ ಜೆ.ಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ, ಹಾಗೂ ತಜ್ಞರೇ ಹೇಳಿದ್ದಾರೆ.ಆದರೂ ಇದರ ಬಗ್ಗೆ ಮೈ ಮರೆಯದೆ, ಕೆಲವು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ
ಸೂಚನೆ ನೀಡಿದರು

IMG 20240103 WA0014

ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್-1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಎಂಬ ಮಾಹಿತಿ ಇದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದೆಂದು ಮನವಿ ಮಾಡಿದರು.

ಜನದಟ್ಟಣೆ ಮತ್ತಿತರ ಕಡೆ ಅಗತ್ಯ ಇರುವವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‍ಗಳನ್ನು ಧರಿಸುವುದು ಉತ್ತಮ. ಆದರೆ ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸಲೇಬೇಕೆಂಬ ಆದೇಶವನ್ನು ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ಮಾಡಿದರು.

ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದರು.
ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ .ಅವರು ವಿವಿಧ ವ್ಯಾಧಿಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ ಎಂದು ಹೇಳಿದರು.
ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ತಿಳಿಸಿದರು.

IMG 20240103 WA0015

ಮುಖ್ಯಾಂಶಗಳು

*ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಬೆಡ್‍ಗಳನ್ನು ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

*ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 18,141 ಹಾಸಿಗೆಗಳು, 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರಗಳಲ್ಲಿ 11,500 ಹಾಸಿಗೆಗಳು ಇವೆ.

*ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರ ಜೆಎನ್-1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನು ತೆಗೆದುಕೊಂಡಿದ್ದೇವೆ.

*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಅದರಂತೆ ಇಲಾಖೆಯಲ್ಲಿರುವ ಕೋವಿಡ್ ವಾರಿಯರ್ಸ್‍ಗಳು
ಫ್ಲೂ-ಲಸಿಕೆಯನ್ನು ಪಡೆಯಬೇಕು.

*ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮಥ್ರ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ.

*ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ.

*ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

*30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರೂ ಮತ್ತು ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ , ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡï, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನï.ಮಂಜುನಾಥ್ , ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.