IMG 20240109 WA0007 scaled

ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿ ಕೊಡುಗೆ….!

POLATICAL STATE

ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿ ಕೊಡುತ್ತಿರುವುದು, ಅದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಬಸವರಾಜ ಬೊಮ್ಮಾಯಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ರಬುದ್ದ ಹೇಳಿಕೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಪ್ರಧಾನಿ ನರೇಂದ್ರ‌ ಮೋದಿಯವರು ಕೊಡುತ್ತಿದ್ದು, ರಾಜ್ಯ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೊಡುತ್ತಿಲ್ಲ. ಅನ್ನಭಾಗ್ಯದ ಶ್ರೇಯಸ್ಸು ನರೇಂದ್ರ ಮೋದಿಯವರಿಗೆ ಸೇರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ಜನರಿಗೆ ಹಂಚುತ್ತಿರುವ ಮಂತ್ರಾಕ್ಷತೆ ಅನ್ಮಭಾಗ್ಯದ್ದು ಎಂದು ಆರೋಪಿಸಿರುವುದಕ್ಕೆ ತಿರುಗೇಟು ನೀಡಿರುವ ಅವರು, ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ, ಕೇವಲ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿ ಮಾತ್ರ ಕೊಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಒಂದು ಕಾಳು ಅಕ್ಕಿಯನ್ನೂ ಕೊಟ್ಟಿಲ್ಲ ಎಂದು ಹೇಳಿದರು.
ರಾಮ ಮಂದಿರ ಉದ್ಘಾಟನೆಯ ದಿನ ರಾಜ್ಯ ಸರ್ಕಾರ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆದೇಶ ಮಾಡಿರುವ ಕುರಿತುವ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಮನ ಭಕ್ತ ಎಂದು ಹೇಳುತ್ತಿದ್ದಾರೆ. ಸರ್ಕಾರ ಪೂಜೆ ಮಾಡಿಸುತ್ತಿದೆ. ರಾಮನಿಗೆ ಕಾಂಗ್ರೆಸ್ ತಲೆಬಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಇನ್ನು ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವರಾಗಿ ಇದು ಅವರ ಅಪ್ರಭುದ್ದ ಹೇಳಿಕೆ. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇದೆ ಎನ್ನುವುದು ಗೊತ್ತಿರಬೇಕು. ಅವರು ಸಚಿವರಾಗಿರಲು ಅರ್ಹರಲ್ಲ ಎಂದು ಹೇಳಿದರು.

IMG 20240109 WA0009

ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಯೋಜನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.