20240125 221500

ಬಿಜೆಪಿ: ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ….!

National - ಕನ್ನಡ POLATICAL STATE

ಬಿಜೆಪಿಯ ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ: ಜಗದೀಶ್ ಶೆಟ್ಟರ್

ಬೆಂಗಳೂರು: ದೇಶಕ್ಕೆ ಸುರಕ್ಷತೆ ಮತ್ತು ಹೆಚ್ಚಿನ ಶಕ್ತಿ ತುಂಬಲು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮತ್ತೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.
ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರದ -ರಾಜ್ಯದ ನಾಯಕರು ಗೌರವ ಕೊಟ್ಟಿದ್ದಾರೆ. ಯಾವುದೇ ಕಂಡಿಷನ್ ಹಾಕಿ ನಾನು ಬಿಜೆಪಿ ಸೇರಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಶರ್ತರಹಿತವಾಗಿ ಸೇರಿದ್ದೇನೆ. ಮುಂದೆ ಪಕ್ಷ ಬಯಸಿದಂತೆ ನಡೆದುಕೊಳ್ಳುವುದಾಗಿ ಹೇಳಿದರು.

ಅಮಿತ್ ಶಾ ಜೀ ಮತ್ತು ನಡ್ಡಾಜೀ ಅವರನ್ನು ಭೇಟಿ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಎಲ್ಲ ಕಾರ್ಯಕರ್ತರು ನಾನು ಮರಳಿ ಬಿಜೆಪಿ ಸೇರಬೇಕೆಂದು ಬಯಸಿದ್ದರು. ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಅವರು, ಬಿ.ಎಸ್.ಯಡಿಯೂರಪ್ಪ ಅವರು ಈ ಕುರಿತು ಪ್ರಸ್ತಾಪ ಮುಂದಿಟ್ಟರು. ರಾಜ್ಯದ ಹಲವಾರು ಶಾಸಕರು, ಮಾಜಿ ಶಾಸಕರೂ ಇದರ ಕುರಿತು ಪ್ರಸ್ತಾಪಿಸಿದರು. ಕೆಳಹಂತದ ಕಾರ್ಯಕರ್ತರ ಕೋರಿಕೆ, ರಾಷ್ಟ್ರೀಯ ನಾಯಕರ ಸ್ಪಂದನ ಗಮನಿಸಿ ಬಿಜೆಪಿ ಸೇರಿದ್ದಾಗಿ ಹೇಳಿದರು.

ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂಇದ್ದರುರಪಸಾಗಿದ್ದೇನೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

20240125 221512

ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಮತ್ತೆ ಬಿಜೆಪಿಗೆ: ಯಡಿಯೂರಪ್ಪ
ಬೆಂಗಳೂರು: ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಇಂದು ನಡೆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಗದೀಶ್ ಶೆಟ್ಟರ್ ಅವರು ಪಕ್ಷದ ಅನೇಕ ಜವಾಬ್ದಾರಿ ವಹಿಸಿದವರು. ಮುಖ್ಯಮಂತ್ರಿಯಾಗಿ ಅವರು ದುಡಿದಿದ್ದಾರೆ. ಅವರು ಬಿಜೆಪಿಗೆ ಬರಬೇಕೆಂದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆ ಇತ್ತು. ಅದಕ್ಕಾಗಿ ಇವತ್ತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರನ್ನು ನಾನು, ಜಗದೀಶ್ ಶೆಟ್ಟರ್, ವಿಜಯೇಂದ್ರ ಸೇರಿ ಎಲ್ಲರೂ ಭೇಟಿ ಮಾಡಿ, ಅವರು ಸಹ ಸಂತೋಷದಿಂದ ಬಿಜೆಪಿ ಸೇರಲು ಕೋರಿದರು. ಅದರಂತೆ ಇವತ್ತು ಬಿಜೆಪಿ ಸೇರಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಭೇಟಿ ಮಾಡುತ್ತೇವೆ ಎಂದು ವಿವರಿಸಿದರು.
ಶೆಟ್ಟರ್ ಸೇರ್ಪಡೆಯಿಂದ ಬಿಜೆಪಿಗೆ ಹೆಚ್ಚು ಶಕ್ತಿ ಬಂದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದರು. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು.
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದು, ಆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಇ ಮೇಲ್ ಮೂಲಕ ಅದನ್ನು ತಿಳಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದನ್ನು ಇ ಮೇಲ್ ಮೂಲಕ ಕಳಿಸಿದ್ದೇನೆ. ರಾಜೀನಾಮೆ ಪತ್ರ ಕಳಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ವಿವರಿಸಿದರು.
ದೇಶದ ಹಿತರಕ್ಷಣೆಗೆ ಮೋದಿಜೀ ಅವರು ಶ್ರಮಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕಿದೆ. ಬಿಜೆಪಿ ಬೆಳವಣಿಗೆಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಇದ್ದರು.