ಒಂದುವರೆ ವರ್ಷದ ಮಗುವನ್ನು ರಸ್ತೆಯಲ್ಲಿ ಬಿಟ್ಟು ಹೋದ ಪೋಷಕರು!
ಪಾವಗಡ : ಒಂದುವರೆ ವರ್ಷದ ಗಂಡು ಮಗುವನ್ನು ಪೋಷಕರು ಬಿಟ್ಟು ಹೋಗಿರುವ ಘಟನೆ ಪಟ್ಟಣದ ಆರ್ ಜೆ ಸರ್ಕಲ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
ವಿಷಯ ತಿಳಿದ ನಂತರ ಮಗುವಿನ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು,
ನಂತರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಿಬ್ಬಂದಿಗಳು ಮಾಹಿತಿ ಪಡೆದು ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಪೋಷಕರು ಮಗುವಿನ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ತೋರಿದ್ದು, ಈ ಸಂಬಂಧ ಪೋಷಕರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.