2024-25ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ
ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.
ಹಿಂದಿನ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ನಮ್ಮ ಸಕಾರಕ್ಕೂ ಮತ್ತು ಹಿಂದಿನ ಸರ್ಕಾರಕ್ಕೂ ಇರುವ ವ್ಯತ್ಯಾಸ.
ಯಾರೇ ಆಗಲಿ ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಭಾರತೀಯ ಜನತಾ ಪಕ್ಷದಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಭಾರತೀಯ ಜನತಾ ಪಕ್ಷದವರು. ಇದಕ್ಕೆ ಫಲವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕನ್ನಡಿಗರ ಹಿತ ಕಾಪಾಡುವುದು ರಕ್ಷಣೆ ಮಾಡುವುದು ನಮ್ಮ ಸರ್ಕಾರದ ಕರ್ತವ್ಯ. ರಾಜ್ಯಗಳು ಬಲಿಷ್ಠವಾದಲ್ಲಿ ಮಾತ್ರ ಕೇಂದ್ರ ಬಲಿಷ್ಠವಾಗಿರುತ್ತದೆ. ರಾಜ್ಯಗಳು ದುರ್ಬಲವಾದರೆ ಕೇಂದ್ರವು ದುರ್ಬಲವಾಗುತ್ತದೆ. ನಮಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ತೆರಿಗೆ ಪಾಲಿನಲ್ಲಿ ಅನ್ಯಾಯವಾಗಿದೆ. ಸರಿಯಾದ ಪಾಲು ಸಿಗುತ್ತಿಲ್ಲ. ಹೆಚ್ಚು ತೆರಿಗೆ ಸಂಗ್ರಹ ಮಾಡುವ ರಾಜ್ಯ ನಮ್ಮ ಕರ್ನಾಟಕ. ಮೊದಲನೆಯ ರಾಜ್ಯ ಮಹರಾಷ್ಟ್ರ. ನಮ್ಮ ಕರ್ನಾಟಕ ರಾಜ್ಯ ಬಲಿಷ್ಠವಾಗಬೇಕು. ಆದ್ದರಿಂದ ನಮಗೆ ಸಿಗಬೇಕಾದ ತೆರಿಗೆ ಪಾಲು ಸಿಗಬೇಕು. ನಾವು 100 ರೂ ಕೊಟ್ಟರೆ ನಮಗೆ ಕೇವಲ 13 ರೂ ಮಾತ್ರ ಸಿಗುತ್ತಿದೆ. ಇದರಿಂದ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ತಿಳಿಸಿದರು.
ನಾಡಿನ ಜನಕ್ಕೆ ಮಾಡಿರುವ ಅನ್ಯಾಯವನ್ನು ಸಮರ್ಥಿಸುವ ಪ್ರತಿ ಪಕ್ಷದವರು ಮೊದಲು ಕೇಂದ್ರದ ನಾಯಕರ ಮುಂದೆ ರಾಜ್ಯದ ಪರವಾಗಿ ಮಾತನಾಡುವ ತಾಕತ್ತಿಲ್ಲ. ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನಮ್ಮ ಗ್ಯಾರಂಟಿಗಳನ್ನೇ ಕದ್ದಿರುವ ಪ್ರತಿ ಪಕ್ಷದವರು ಅವು ನಮ್ಮ ಗ್ಯಾರಂಟಿಗಳು ಎನ್ನುತ್ತಿದ್ದಾರೆ.
ರಾಜ್ಯದ ಸ್ವಂತ ತೆರಿಗೆ ಶೇ 78% ಇದ್ದರೆ 22% ಕೇಂದ್ರ ಸರ್ಕಾರದಿಂದ ಬರುತ್ತದೆ. ಅದೇ ಗುಜರಾತಿಗೆ 75% ಸ್ವಂತ ತೆರಿಗೆ ಯಿಂದ ಬಂದರೆ 17% ಕೇಂದ್ರದಿಂದ ಹಾಗೂ ಸಹಾಯಧನ ಸೇರಿ 25% ಕೇಂದ್ರದಿಂದ ಹೋಗುತ್ತಿದೆ. ಉತ್ತರ ಪ್ರದೇಶಕ್ಕೆ 48% ಸ್ವಂತ ತೆರಿಗೆ ಇದ್ದರೆ 32% ಹಾಗೂ 20% ಸೇರಿ ಒಟ್ಟು 52% ಕೇಂದ್ರದಿಂದ ಹೋಗುತ್ತಿದೆ. ಆದರೆ ನಮಗೆ ಮಾತ್ರ ಕೇವಲ ಕೇವಲ ಕೇವಲ ಶೇ22% ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಸೇತುವೆ, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕೇಂದ್ರದಿಂದ ಪಾಲು ಬರುತ್ತದೆ. ರೈಲ್ವೇಗೆ ಜಮೀನು ಕೊಟ್ಟು ಯೋಜನಾ ವೆಚ್ಚದಲ್ಲಿ ಶೇ 50 ರಷ್ಟು ರಾಜ್ಯ ಸರ್ಕಾರ ಭರಿಸುತ್ತದೆ. ರೈಲ್ವೆ ಇಂದ ಬಂದ ಆದಾಯವನ್ನು ಅವರೇ ಇಟ್ಟುಕೊಳ್ಳುತ್ತಾರೆ. ಟೋಲ್ ಸಂಗ್ರಹದಿಂದ ಬರುವ ಆದಾಯವನ್ನೂ ನಮ್ಮ ನಾಡಿನ ಜನರಿಗೆ ವಾಪಾಸ್ ಕೊಡುವುದಿಲ್ಲ ಎಂದು ರಾಜ್ಯಗಳಿಗೆ ತೆರಿಗೆಯಲ್ಲಿ ಆಗುತ್ತಿರುವ ಪಟ್ಟಿಯನ್ನೇ ನೀಡಿದರು.
ಕೇಂದ್ರ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ 50257 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ಕೇಂದ್ರ ಪುರಸ್ಕøತ ಯೋಜನೆಗಳೂ ಸೇರಿವೆ. ಅದರಲ್ಲಿಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ ಎಂದರು.
2013 ಮಾರ್ಚ್ ವರೆಗೆ 2067 ಕಿಮೀ ರಸ್ತೆಗಳಾಗಿವೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು, ಇಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ. ಸರ್ವಶಿಕ್ಷಣ ಅಭಿಯಾನದಡಿ 702 ಕೋಟಿ ರೂ. ಕೇಂದ್ರ ಸರ್ಕಾರ ಕೊಟ್ಟರೆ ನಮ್ಮ ಪಾಲು 472 ಕೋಟಿ ರೂ. ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 1528 ಕೋಟಿ ರೂ.ಗಳನ್ನು ನೀಡಿದೆ. ಮಧ್ಯಾಹ್ನದ ಬಿಸಿಯೂಟದಡಿ 594 ಕೋಟಿ ಕೇಂದ್ರ ಕೊಟ್ಟರೆ ರಾಜ್ಯ ಸರ್ಕಾರ 346 ಕೋಟಿ ರೂ. ನೀಡಿ ಹೆಚ್ಚುವರಿಯಾಗಿ 967 ಕೋಟಿ ರೂ.ಗಳನ್ನು ನೀಡಿದೆ. ಆಯುμÁ್ಮ ನ್ ಭಾರತ್ ಯೋಜನೆಯಡಿ 187 ಕೋಟಿ ರೂ. ಗಳನ್ನು ಕೇಂದ್ರ ನೀಡಿದ್ದರೆ 124 ಕೋಟಿ ರೂ ಜೊತೆಗೆ 624 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ ಎಂದು ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 350 ಕೋಟಿ ನೀಡಿದೆ ಅದರ ಜೊತೆಗೆ 8569 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಕೊಟ್ಟಿದೆ. ಒಟ್ಟಾರೆಯಾಗಿ 13005 ಕೋಟಿ ರೂ.ಗಳು ಕೇಂದ್ರ ಪುರಸ್ಕøತ ಯೋಜನೆಗಳಿಗೆ ಬರುತ್ತದೆ ಅμÉ್ಟೀ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಪಿ.ಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ 35 ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ. ಪಿ.ಎಂ ಆವಾಸ್ ಯೋಜನೆಯಡಿ 5-6 ಲಕ್ಷ ರೂ ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50.ಲಕ್ಷ ರೂ. ನೀಡುತ್ತದೆ. ಅದರ ಜೊತೆಗೆ 1.38 ಲಕ್ಷ ಜಿ.ಎಸ್.ಟಿ ಸೇರಿ ಒಂದು ಮನೆಗೆ ಕೇಂದ್ರ ಸರ್ಕಾರ ನೀಡುವುದು ಕೇವಲ 12 ಸಾವಿರ ರೂ ಮಾತ್ರ ಎಂದರು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು
15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇμÉ್ಟೂಂದು ಅನ್ಯಾಯ ಆಗಲಿಲ್ಲ. ಪರಿಹಾರ ಜೂನ್ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈಬಾರಿ ಕಡಿತಗೊಳಿಸಿದ್ದಾರೆ. ಇμÉ್ಟಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ಎಂದರು.
ಸಬ್ ಕಾ ಸಾಥ್ ಎಂದವರು ಪೆಟ್ರೋಲ್ ಡೀಸೆಲ್ ಬೆಲೆ, ಗ್ಯಾಸ್ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕರಿಂದ ಐದು ಸಾವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ.
ಪ್ರತಿ ಪಕ್ಷದವರು ರಾಜ್ಯದ ಜನತೆಯ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ. ರಾಜ್ಯದಲ್ಲಿ ಬೀಕರ ಬರಗಾಲವಿರುವುದು ಸತ್ಯ. ಬರ ಅಧ್ಯಯನಕ್ಕಾಗಿ ಕೇಂದ್ರದಿಂದ ತಂಡಗಳನ್ನು ಸಹ ಕಳುಹಿಸಿದ್ದರು. ಬರ ವೀಕ್ಷಿಸಿದ ತಂಡಗಳು ತಮ್ಮ ವರದಿಗಳನ್ನು ಸಹ ನೀಡಿದ್ದಾರೆ. ರಾಜ್ಯದಲ್ಲಿನ 240 ತಾಲ್ಲೂಕುಗಳಲ್ಲಿ 220 ತಾಲೂಕುಗಳನ್ನು ಬರ ಪರಿಸ್ಥಿತಿಯಲ್ಲಿವೆ ಎಂದು ಘೋಷಿಸಲಾಗಿದೆ. ಅದರಲ್ಲಿ 196 ತಾಲ್ಲೂಕುಗಳು ತೀವ್ರ ಬರಗಾಲವನ್ನು ಎದುರಿಸುತ್ತಿದೆ. ನಲವತ್ತ ಎಂಟು ಲಕ್ಷಕ್ಕೂ ಹೆಚ್ಚು ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿ ಮೂವತ್ತ ಐದು ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ನಷ್ಟವಾಗಿದೆ. ಕುಡಿಯಲು ನೀರಿಲ್ಲ, ದನಕರುಗಳಿಗೆ ಮೇವಿಲ್ಲ, ಪರಿಹಾರ ಕೋರಿ 2023, ಅಕ್ಟೋಬರ್ 20 ಹಾಗೂ 2023 ನವೆಂಬರ್ 16 ರಂದು ಎರಡು ಮನವಿಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದೇವೆ, ಮಾನ್ಯ ಪ್ರಧಾನಮಂತ್ರಿಗಳು, ಗೃಹ ಮಂತ್ರಿಗಳು, ಹಣಕಾಸು ಮಂತ್ರಿಗಳನ್ನು ಸಹ ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯನ್ನು ತಿಳಿಸಿದ್ದೇವೆ. ಆದರೆ ಇದುವರೆಗೂ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿಲ್ಲ. ನರೇಗಾ ಯೋಜನೆಯಡಿ 100 ದಿನಗಳ ಕೆಲಸವನ್ನು 150 ದಿನಗಳಿಗೆ ಹೆಚ್ಚಿಸುವಂತೆ ಮನವಿಯನ್ನು ಮಾಡಿದ್ದೇವೆ ಆದರೆ ಇದುವರೆಗೂ ಯಾವುದಕ್ಕೂ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಸ್ಪಂದಿಸಿಲ್ಲ ನಮ್ಮ ಸಂಸದರು ಈ ಬಗ್ಗೆ ಮೌನ ವಹಿಸಿದ್ದಾರೆ. ಕರ್ನಾಟಕದ ಜನ ಇವರನ್ನು ಮುಂಬರುವ ಚುನಾವಣೆಯಲ್ಲಿ ತಿರಸ್ಕರಿಸಬೇಕು.
ಸೆಸ್, ಸರ್ಚಾರ್ಜ್ ನಲ್ಲಿ ನಮಗೆ ಪಾಲು ಕೊಡುವುದಿಲ್ಲ. ಸೆಸ್, ಸರ್ಚಾರ್ಜ್ ಮೂಲ 5,52,000 ಕೋಟಿ ರೂ. ಸಂಗ್ರಹವಾಗಿದೆ. ಸೆಸ್ ಸರ್ಚಾರ್ಜ್ 1958 ರಿಂದ ವಿಧಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ 1999 ರ ವರೆಗೆ ಸೆಸ್ ಸರ್ಚಾರ್ಜ್ ನಲ್ಲಿ ರಾಜ್ಯಕ್ಕೆ ಪಾಲು ದೊರೆಯುತ್ತಿದ್ದು. ತಿದ್ದುಪಡಿ ಮಾಡಿ ಇದನ್ನು ಸ್ಥಗಿತಗೊಳಿಸಲಾಯಿತು.
ಕನಿಷ್ಠ ತೆರಿಗೆಯ 50% ಆದರೂ ನಮಗೆ ಕೊಡಬೇಕು. 4.71% ರಿಂದ 3.64% ಗೆ ಕಡಿಮೆಯಾಗಿದೆ.. ಇದರ ಅರಿವಾಗಿಯೇ 15ನೇ ಹಣಕಾಸು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದ್ದು. ನಾವು ಸಾಲ ಮಾಡಿರುವುದು ನಿಜ. ಆದರೆ ಅದು ಜಿ.ಎಸ್.ಡಿ.ಪಿ.ಯ ಶೇ. 23.68 ರಷ್ಟಿದೆ. ಅಂದರೆ ಶೇ. 25ರ ಒಳಗೇ ಇದೆ. ವಿತ್ತೀಯ ಕೊರತೆ 2.95% ಇದೆ. ರಾಜಸ್ವ ಉಳಿತಾಯ ಇಲ್ಲ, ನಿಜ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ 5.1% ರಷ್ಟಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಒಂದೇ ಒಂದು ಬಾರಿ 2020-21 ರಲ್ಲಿ ಶೇ 3 ರ ಮಿತಿ ದಾಟಿದೆ. ಇನ್ನು ಎರಡು ವರ್ಷದಲ್ಲಿ ಆಯವ್ಯಯವನ್ನು ರಾಜಸ್ವ ಉಳಿತಾಯಕ್ಕೆ ತಂದೇ ತರುವುದಾಗಿ ಸದನಕ್ಕೆ ಭರವಸೆ ನೀಡುತ್ತೇನೆ.
2018 ರಲ್ಲಿ ನನ್ನ ಅವಧಿಯ ಮುಕ್ತಾಯದ ವೇಳೆ 2.42 ಲಕ್ಷ ಕೋಟಿ ಸಾಲ ಇದ್ದು, 2023 ಮಾರ್ಚ್ ವೇಳೆಗೆ 5.23 ಲಕ್ಷ ಕೋಟಿ ಇದೆ. ಆದರೆ ಹಿಂದನಿ ಸರ್ಕಾರ ನಾಲ್ಕು ವರ್ಷದಲ್ಲಿ 2,81,00 ಕೋಟಿ ರೂ. ಮಾಡಿದ್ದಾರೆ. ಇದಲ್ಲದೇ ಜಿ.ಎಸ್.ಟಿ. ಪರಿಹಾರ ಸಾಲ 3,000 ಕೋಟಿ ರೂ. ಮಾಡಿದ್ದಾರೆ.
ನಾವು ಬಡವರಿಗೆ, ರೈತರಿಗೆ, ಹೆಣ್ಣುಮಕ್ಕಳಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದ ಭೌತಿಕ ಆರೋಗ್ಯ, ಆರ್ಥಿಕ ಆರೋಗ್ಯ, ಮಾನಸಿಕ ಆರೋಗ್ಯ ಹಾಗೂ ಆಧ್ಯಾತ್ಮಿಕ ಆರೋಗ್ಯ – ಈ ನಾಲ್ಕು ಆಯಾಮಗಳಲ್ಲಿ ಕಾರ್ಯನಿರ್ವಹಿಸಲಿದ್ದೇವೆ ಎಂದು ತಿಳಿಸಿದರು.