ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ,ಆಕ್ಸಿಜನ್ ಕೊರತೆ
ರೋಗಿಗಳ ನೆರವಿಗೆ ಬಂದ ಸರ್ಕಾರ
ಬೆಂಗಳೂರು : ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ,ಆಕ್ಸಿಜನ್ ಕೊರತೆಯಿಂದ 350 ಕ್ಕೂ ಹೆಚ್ಚು ರೋಗಿಗಳು ಪರದಾಡಿದ ಘಟನೆ ಇಂದು ನಡೆದಿದೆ.
ಆಕ್ಸಿಜನ್ ಪೂರೈಸಬೇಕಾಗಿದ್ದ ಕಂಪನಿ ಸಕಾಲದಲ್ಲಿ ಪೂರೈಸದಿರುವುದೆ ಈ ಎಲ್ಲಾ ಎಡವಟ್ಟಿಗೆ ಕಾರಣ ಎನ್ನುತ್ತಿವೆ ಆಸ್ಪತ್ರೆ ಯ ಆಡಳಿತವರ್ಗ.
ಕ್ಸಿಜನ್ ಸಮಸ್ಯೆಯಿಂದ 350 ಕ್ಕೂ ಹೆಚ್ಚು ರೋಗಿಗಳು ಪರದಾಡಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಖಾಸಗಿ ಏಜೆನ್ಸಿಯವರಿಂದ ಆಕ್ಸಿಜನ್ ವಿತರಣೆಯಾಗುತ್ತಿತ್ತು, ಆದರೆ ಸಕಾಲದಲ್ಲಿ ಏಜೆನ್ಸಿಯವರಿಂದ ಆಕ್ಸಿಜನ್ ವಿತರಣೆಯಾಗದ ಹಿನ್ನೆಲೆ ಈ ಸಮಸ್ಯೆ ಸೃಷ್ಟಿಯಾಗಿದೆ.
ರೋಗಿಗಳ ನೆರವಿಗೆ ಸರ್ಕಾರ
*ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್*
*ಕಿಮ್ಸ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ; ಕೂಡಲೇ 20 ಭಾರೀ ಗಾತ್ರದ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ; ವಿಕ್ಟೊರಿಯಾ, ಬೌರಿಂಗ್, ರಾಜೀವ್ ಗಾಂಧಿ ಆಸ್ಪತ್ರಗೆ ರೋಗಗಳ ರವಾನೆ*
*ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧ*
*ರಾಜ್ಯದ ಸಕ್ರಿಯ ಸೋಂಕಿತರ ಪೈಕಿ ಶೇ. 0.86% ಸೋಂಕಿತರು ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ*
ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ. ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯ ಒದಗಿಸುವುದು ದೊಡ್ಡ ಸವಾಲು ನಿಜ. ಆದರೆ ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇರುವುದು ನನ್ನ ಗಮನಕ್ಕೆ ಬಂದ ಕೂಡಲೇ 40ಕ್ಕೂ ಹೆಚ್ಚು ರೋಗಿಗಳನ್ನು ವಿಕ್ಟೊರಿಯಾ, ಬೌರಿಂಗ್ & ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲು ಅಂಬುಲನ್ಸ್ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ 20 ಭಾರೀ ಗಾತ್ರದ ಆಕ್ಸಿಜನ್ ಸಿಲಿಂಡರ್ ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ, ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ 80,643 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಅದರಲ್ಲಿ 695 ಅಂದರೆ ಶೇ. 0.86% ಸೋಂಕಿತರು ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಚಿಕಿತ್ಸೆಗೆ ಮೂಲಭೂತ ಸೌಕರ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದ್ದು ಯಾವುದೇ ಕೊರತೆಯಿಲ್ಲ.
ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿದಲಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್