IMG 20200819 WA0093

10.5 ಲಕ್ಷ ರೈತರಿಗೆ ಸಾಲ….!

Uncategorized

10.5 ಲಕ್ಷ ರೈತರಿಗೆ ಈವರೆಗೆ ಸಾಲ; ಸಚಿವ ಎಸ್.ಟಿ.ಎಸ್

* ಮಾಲೂರು ಬಿಜೆಪಿ ಕಚೇರಿಗೆ ಭೇಟಿ, ಸಭೆ

ಮಾಲೂರು: ಇದು ನಮ್ಮದೇ ಸರ್ಕಾರ, ನಮ್ಮ ಮಾತು ಇಲ್ಲಿ ನಡೆಯುತ್ತದೆ. ನಾವು ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುತ್ತೇವೆ ಎಂಬ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಕಾರ್ಯನಿರ್ವಹಿಸಿದಲ್ಲಿ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮಾಲೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, ನಾನು ಪ್ರತಿ ಜಿಲ್ಲೆಗಳಿಗೆ ಹೋದಂತಹ ಸಂದರ್ಭದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಇಲಾಖೆಯ ಹಾಗೂ ಸರ್ಕಾರದ ಯೋಜನೆಗಳನ್ನು ತಿಳಿಸುವ ಪರಿಪಾಠವನ್ನು ಬೆಳೆಸಿಕೊಂಡು ಬಂದಿದ್ದೇನೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಮೂಲಕ 24 ಲಕ್ಷ ರೈತರಿಗೆ ಸಾಲ ನೀಡುವ ಗುರಿಹಾಕಿಕೊಳ್ಳಲಾಗಿದೆ. ಈಗಾಗಲೇ 10.5 ಲಕ್ಷ ರೈತರಿಗೆ ಸಾಲ ವಿತರಣೆ ಮಾಡಲಾಗಿದೆ. ಸರ್ಕಾರ ಸಹ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಹಾಗೂ ಪತ್ತಿನ ಸಹಕಾರ ಸಂಘಗಳು ಒಂದೇ ವೇದಿಕೆಯಡಿ ಕಾರ್ಯನಿರ್ವಹಣೆ ಮಾಡುವ ಸಂಬಂಧ ಏಕತಂತ್ರಾಂಶವನ್ನು ಅಳವಡಿಸಲು ಚಿಂತನೆ ಇದ್ದು, ಆ ಹಿನ್ನೆಲೆಯಲ್ಲಿ ಈಗಾಗಲೇ ಒಂದೆರಡು ಸುತ್ತಿನ ಸಭೆಗಳು ನಡೆದಿವೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಡಾ. ವೇಣುಗೋಪಾಲ್ ಮಾತನಾಡಿ, ಸಹಕಾರ ಸಚಿವರಾದ ಸೋಮಶೇಖರ್ ಅವರು ಪಕ್ಷದ ಕಚೇರಿಗೆ ಭೇಟಿ ನೀಡುವ ಪರಿಪಾಠವನ್ನಿಟ್ಟುಕೊಂಡಿದ್ದಾರೆ. ಇದರಿಂದ ನಮ್ಮ ಕಾರ್ಯಕರ್ತರನ್ನು ಮತ್ತಷ್ಟು ಹುರಿದುಂಬಿಸುವಂತೆ ಮಾಡುತ್ತಿದೆ. ಇನ್ನು ರೈತರ ಸಮಸ್ಯೆಗಳಿಗೆ ಅವರು ಉತ್ತಮವಾಗಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.IMG 20200820 055512

ಸಹಕಾರ ಇಲಾಖೆ & ಕರ್ನಾಟಕ ಸರ್ಕಾರದ ವತಿಯಿಂದ ಮಾಲೂರಿನ ಜೆ.ಎಸ್.ಎಸ್ ಶಾಲೆಯ ಆವರಣದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ, ಮಾಲೂರು ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಆಶಾ ಕಾರ್ಯಕರ್ತರಿಗೆ 3000 ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಪಿ.ನಾರಾಯಣಸ್ವಾಮಿ, ಸಂಸದರಾದ ಮುನಿಸ್ವಾಮಿ ಸೇರಿ ಇತರರು ಇದ್ದರು.