60b2ce18 2517 4f4b b1e6 80ad76519910

Karnataka : DC ಗಳು ಎಂದರೆ ಮಹಾರಾಜರಲ್ಲ….!

Genaral STATE
  • ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ
  • DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ
  • ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ
  • ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ: ಸಿ.ಎಂ ಖಡಕ್ ಎಚ್ಚರಿಕೆ

ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.

ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.

ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.89bcccac 9145 43e8 8717 7e101c79c794

ಜನಪರ ಕಾರ್ಯಕ್ರಮಗಳು ಸಕಾಲದಲ್ಲಿ ಜನರಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ ಎಂದು ತಿಳಿಸಿದರು

ಮುಖ್ಯಮಂತ್ರಿಗಳ ಆರಂಭಿಕ ಮಾತಿನ ಹೈಲೈಟ್ಸ್…

DC-CEO ಗಳು, ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಗಳನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರಗತಿ ಮತ್ತು ಅಭಿವೃದ್ಧಿಯ ವೇಗ ಕಾಣಲು ಸಾಧ್ಯ

ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ

ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್ ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ

ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು.

SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ

*DC, CEO, ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು.a244bdd9 f5e0 4414 a7c7 1f137618fa1c

DDPI, DC, CEO ಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು :

ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿ, DC, CEO ಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು Forward ಮಾಡಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು ? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು ಖಾರವಾಗಿ ಪ್ರಶ್ನಿಸಿದರು. ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು

ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರುbb7fe9a8 e703 4b39 96c9 6af0f2652757

ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು

ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು

ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ.

ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು

ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.ಜನ DC, AC ತಹಶೀಲ್ದಾರ್ ಕಚೇರಿಗಳಿಗೆ ಅಲೆಯೋದು ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಎಂದು ಪ್ರಶ್ನಿಸಿದರು