IMG 20240715 WA0121 scaled

ವಿಧಾನಪರಿಷತ್ : ಪಡಿತರ ಚೀಟಿಗಳನ್ನು ವಿತರಿಸಲು ಅಗತ್ಯ ಕ್ರಮ…!

POLATICAL STATE

ಪಡಿತರ ಚೀಟಿಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು, ಜುಲೈ 15(ಕರ್ನಾಟಕ ವಾರ್ತೆ): ಹೊಸ ಅದ್ಯತಾ ಪಡಿತರ ಚೀಟಿ ಕೋರಿ ಜುಲೈ 3, 2024ರ ವರೆಗೆ ಒಟ್ಟು 3,22,483 ಅರ್ಜಿಗಳು ಸ್ವೀಕೃತವಾಗಿವೆ. ಇದರಲ್ಲಿ ಸುಮಾರು 2,95,986 ಅರ್ಜಿಗಳ ವಿಲೇವಾರಿಗೆ ವಿಲೇವಾರಿ ಮಾಡಲು ಸೆಪ್ಟೆಂಬರ್ 29 ರಂದು ಆದೇಶಿಸಲಾಗಿರುತ್ತದೆ ಹಾಗೂ 62,595 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಬಾಕಿ ಇರುವ ಅರ್ಜಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ರಾಜ್ಯದ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ / ಉಪ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖಾ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಪ್ರಥಾಪ ಸಿಂಹ ನಯಕ್ ಅವರ ಚುಕ್ಕೆ ಗುರಿತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದದಲ್ಲಿ ಅದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಸಲುವಾಗಿ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು / ಮಂಡಳಿಗಳು/ ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಅಧಾಯ ತೆರಿಗೆ / ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದುರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಗಳು, ಜೀವನೋಪಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ಯಾಕ್ಟರ್, ಮ್ಯಾಕ್ಸಿ ಕ್ಯಾಬ್ ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲಾ ಕುಟುಂಬಗಳು, ವಾರ್ಷಿಕ ಆದಾಯವು ರೂ. 1.20 ಲಕ್ಷಕ್ಕಿಂತಲೂ ಹೆಚ್ಚು ಇರುವ ಕುಟುಂಬಗಳನ್ನು (ಅರ್ಹತೆಯನ್ನಾಧರಿಸಿ ಹೊರಗಿಡುವ ) ಮಾನದಂಡಗಳು ಜಾರಿಯಲ್ಲಿರುತ್ತವೆ. ಈ ಮಾನದಂಡಗಳನ್ವಯ ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳಿಗೆ ಅದ್ಯತಾ ಪಡಿತರ ಚೀಟಿಗಳನ್ನು ಪಡೆಯಲು ಕೋರಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಾಗಿರುತ್ತದೆ ಎಂದು ಸಚಿವರು ತಿಳಿಸದರು.