ನೀರಾವರಿ ಯೋಜನೆಗಳಿಗೆ ಮೊದಲ ಆದ್ಯತೆ. ಲೋಕಸಭಾ ಸದಸ್ಯ ಗೋವಿಂದ ಕಾರಜೋಳ
ಪಾವಗಡ: ಮಳೆಯ ಮೇಲೆ ಅವಲಂಬಿತವಾಗಿರುವ ಪಾವಗಡ ತಾಲ್ಲೂಕಿಗೆ ನೀರಾವರಿ ಅತ್ಯವಶ್ಯಕ ವೆಂದು
ರೈತರಿಗೆ ಅನುಕೂಲವಾಗುವ ರೀತಿ ನೀರಾವರಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ತಿಳಿಸಿದರು.
ಪಟ್ಟಣದಲ್ಲಿ ಸೋಮವಾರ ಜೆಡಿಎಸ್ ಮತ್ತು ಬಿಜೆಪಿ ತಾಲ್ಲೂಕು ಘಟಕ ಆಯೋಜಿಸಿದ್ದ ಅಭಿನಂದನೆ, ಕೃತಜ್ಞತಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಶೀಘ್ರದಲ್ಲಿಯೇ ನೀರಾವರಿ ಯೋಜನೆಗಳ ಕಾಮಗಾರಿ ವೇಗ ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾದಾಯಿ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆಗಳ ಸಮಗ್ರ ವರದಿ ನೀಡಲಾಗಿದೆ. ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು. ತಿಂಗಳಿಗೊಮ್ಮೆ ತಾಲ್ಲೂಕಿಗೆ ಆಗಮಿಸಿ ಒಂದು ದಿನ ಪೂರ್ತಿ ಜನತೆಯಿಂದ ಅಹವಾಲು ಸ್ವೀಕರಿಸಲಾಗುವುದು ಎಂದರು.
ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪ, ಮಾತನಾಡಿ,
ಎಚ್ ಡಿ ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಈ ಭಾಗದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಅನುಕೂಲವಾಗಲಿದೆ ಎಂದರು.
ಬಿಜೆಪಿ ರಾಜ್ಯ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಎಸ್ ಶಿವಪ್ರಸಾದ್ ಮಾತನಾಡಿ,ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಅವರು ವಿವಿಧ ಸರ್ಕಾರಗಳಲ್ಲಿ ಸಚಿವರಾಗಿ ಕೆಲಸ ಮಾಡಿರುವ ಅನುಭವ ಇದೆ. ಹೀಗಾಗಿ ಈ ಭಾಗದ ಅಭಿವೃದ್ಧಿಯಾಗಲಿದೆ ಎಂದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಗಣನೀಯ ಯಾವೊಂದು ಅಭಿವೃದ್ಧಿ ಕಾರ್ಯಕ್ಕೂ ಚಾಲನೆ ನೀಡಿಲ್ಲ . ಗ್ಯಾರಂಟಿಗಳ ಹೆಸರಿನಲ್ಲಿ ಕಾಲ ಕಳೆಯುತಿದೆ ಎಂದರು. ಅಭಿವೃದ್ಧಿ ಕೆಲಸ ಮಾಡದೆ ಜನತೆಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್ ಸಿ ಅಂಜಿನಪ್ಪ, ಸ್ಥಳೀಯ ಶಾಸಕರು ಕ್ಷೇತ್ರದ ಅಭಿವೃದ್ಧಿಯನ್ನು ಮರೆತಂತಿದೆ. ಸರ್ಕಾರವೂ ಮೈ ಮರೆತು ಕೂತಿದೆ. ಕೇಂದ್ರ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಕೆಲಸಗಳಾಗಬೇಕಿದೆ ಎಂದರು.
ಜೆ ಡಿಎಸ್ ತಾಲೂಕು ಘಟಕದ ಅಧ್ಯಕ್ಷ ಏನ್ ಎ ಈರಣ್ಣ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ರಂಗಣ್ಣ, ಡಾ. ಜಿ. ವೆಂಕಟರಾಮಯ್ಯ, ಎನ್ ತಿಮ್ಮರೆಡ್ಡಿ, ಬಲರಾಮರೆಡ್ಡಿ, ಅಕ್ಕಲಪ್ಪ ನಾಯ್ಡು, ಮನು ಮಹೇಶ್, ಬ್ಯಾಡ ನೂರು ಶಿವು, ಅಂಬಿಕಾ ರಮೇಶ್, ಗಂಗಾಧರ್ ನಾಯ್ಡು, ಆಂಜನೇಯ ಇದ್ದರು.
ವರದಿ. ಶ್ರೀನಿವಾಸಲು. A