ಶೇಂಗಾ ಬೆಳಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಪ್ರಕಟಣೆ
ಪಾವಗಡ : ಶೇಂಗಾ ಬೆಳೆಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು 15/8/.2024 ಗುರುವಾರ ಕೊನೆಯ ದಿನಾಂಕ ವಾಗಿರುತ್ತದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕೃತಿ ವಿಕೋಪ ಹಾಗೂ ಕೀಟ, ರೋಗಭಾದೆಯಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು.
ತಾಲ್ಲೂಕಿನಲ್ಲಿ ಓರಿಯಂಟಲ್ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಸಂಸ್ಥೆಯನ್ನು ಬೆಳೆ ವಿಮೆ ಯೋಜನೆಯನ್ನು ಅನುಷ್ಠಾನ ಮಾಡಲು ನಿಗದಿಪಡಿಸಲಾಗಿರುತ್ತದೆ.
ಆದ್ದರಿಂದ ರೈತರು ವಿಮಾ ಯೋಜನೆ ಅಡಿ ನೋಂದಾಯಿಸಲು ಫ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ರೈತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳವಿಮೆಗೆ ನೋಂದಾಯಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ಆರ್ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ವರದಿ. ಶ್ರೀನಿವಾಸಲು. A