ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್ ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು.
ಇದೇ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಕಾವೇರಿ ಮಾತೆಗೆ ಸಮರ್ಪಿಸಿದರು.
ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.
ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಜೊತೆಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.
ಕಾರ್ಯಕ್ರಮದಲ್ಲಿ ಜೈಕಾ ಪ್ರತಿನಿಧಿಗಳು, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಸೇರಿದಂತೆ ಸಚಿವರು, ಶಾಸಕರು, ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು, ಅಧಿಕಾರಿಗಳು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜೈಕಾ ಪ್ರತಿನಿಧಿಗಳು, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಸೇರಿದಂತೆ ಸಚಿವರು, ಶಾಸಕರು, ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು, ಅಧಿಕಾರಿಗಳು ಗಣ್ಯರು ಉಪಸ್ಥಿತರಿದ್ದರು.