ಬಿಸಿ ಊಟ ಸೇವಿಸಿದ ಶಾಲಾ ಮಕ್ಕಳು ಅಸ್ವಸ್ಥ ಆಸ್ಪತ್ರೆಗೆ ದಾಖಲು.
ಪಾವಗಡ: ತಾಲ್ಲೂಕಿನ ನಿಡಗಲ್ ಹೋಬಳಿಯ ಕೊಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳು ಮಧ್ಯಾಹ್ನ ದ ಬಿಸಿ ಊಟ ದ ನಂತರ ಕೆಲವು ಮಕ್ಕಳಲ್ಲಿ ವಾಂತಿ, ಹೊಟ್ಟೆ ನೊವು, ಕಾಣಿಸಿಕೊಂಡು
ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಲೆಯಲ್ಲಿ ಕೆಲ ಮಕ್ಕಳು ವಾಂತಿ ಮಾಡಿಕೊಂಡ ನಂತರ ಗಾಬರಿಗೊಂಡ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮನಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ನಂತರ ಪೋಷಕರು 40 ಜನ ಮಕ್ಕಳನ್ನು ಖಾಸಗಿ ಟಿ ಟಿ ಯಲ್ಲಿ ಕರೆದುಕೊಂಡು ಆಸ್ಪತ್ರೆಗೆ ಬಂದಿದ್ದು.
ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ಆಸ್ಪತ್ರೆ ವೈದ್ಯರ ಜೊತೆ ಮಾತಾಡಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ವಿಷಯ ತಿಳಿದ ನಂತರ ತಹಶೀಲ್ದಾರ್ ವರದರಾಜು, ಇ ಓ ಜಾನಕಿ ರಾಮ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.
ವರದಿ: ಶ್ರೀನಿವಾಸಲು ಎ