IMG 20241202 WA0003

ತುಮಕೂರು : ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್….!

DISTRICT NEWS Genaral STATE ತುಮಕೂರು
  • ಟೀಕಾಕಾರರಿಗೆ ಉತ್ತರ ನೀಡುತ್ತೇವೆ – ಕೆ.ಎನ್. ರಾಜಣ್ಣ
  • ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಪರಂ ಮನವಿ
  • ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು(ಕ.ವಾ.)ಡಿ.2: ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.IMG 20241202 WA0021

ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲಾ ಸಮುದಾಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗಲು ಸಾಧ್ಯ. ಯಾವುದೇ ದೇಶದ ಅಭಿವೃದ್ಧಿಯು ಹಳ್ಳಿ, ತಾಲ್ಲೂಕು, ಜಿಲ್ಲೆಗಳ ಅಭಿವೃದ್ಧಿಯ ಮೇಲೆ ನಿಂತಿದೆ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲಾ ಧರ್ಮ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ಬೇಧವಿಲ್ಲದೆ ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಎಲ್ಲಾ ವರ್ಗದ ಜನರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಆರ್ಥಿಕತೆಯ ವೇಗವೂ ಹೆಚ್ಚಾಗಿದೆ ಎಂದು ತಿಳಿಸಿದರು. Juniyar College 59

ಕಳೆದ ಜನವರಿ ಮಾಹೆಯಲ್ಲಿ ಇದೇ ವೇದಿಕೆಯಲ್ಲಿ  697 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ವಿವಿಧ ಯೋಜನೆಗಳಲ್ಲಿ 30,000 ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿತ್ತು. ಇಂದು ಈ ವೇದಿಕೆಯಿಂದ 1250 ಕೋಟಿ ರೂ.ಗಳಿಗೂ ಹೆಚ್ಚಿನ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ 1.50 ಲಕ್ಷ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸುತ್ತಿರುವುದು ನನಗೆ ಸಂತಸ ತಂದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನದಿಂದ ಅಭಿವೃದ್ಧಿ ಕಾಮಗಾರಿಗೆ ಹಣವಿಲ್ಲವೆಂದು ಟೀಕಿಸುವವರಿಗೆ ಇಂತಹ ಕಾರ್ಯಕ್ರಮಗಳು ಉತ್ತರವಾಗಲಿದೆ ಎಂದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಕೊಡುತ್ತಲೇ ಬಂದಿದೆ. ಅಲ್ಲದೆ, ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳನ್ನು ರಾಜ್ಯದಲ್ಲಿ ಮಾತ್ರ ಅನುಷ್ಟಾನ ಮಾಡಲಾಗಿದೆ ಎಂದು ತಿಳಿಸಿದರಲ್ಲದೆ, ನಮ್ಮ ಸರ್ಕಾರ ಮಹಿಳೆಯರು, ಎಲ್ಲಾ ಜಾತಿ ಹಾಗೂ ಧರ್ಮ, ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಪರಂ ಮನವಿ

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ  ಮಾತನಾಡುತ್ತಾ, ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.IMG 20241202 WA0003

ತುಮಕೂರು ಜಿಲ್ಲೆಯು ಅಭಿವೃದ್ಧಿಯ ಕಡೆ ದಾಪುಗಾಲು ಇಡುತ್ತಿದೆ. ಜಿಲ್ಲೆಯಲ್ಲಿ ಏμÁ್ಯದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20,000 ಎಕರೆ ಭೂಮಿಯನ್ನು ನೀಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ಯೋಜನೆ ತರಲು ಮುಖ್ಯಮಂತ್ರಿಯವರನ್ನು ಕೇಳಿಕೊಂಡಾಗ, ಅದಕ್ಕೆ ಒಪ್ಪಿ ಕಾರ್ಯಕ್ರಮದ ವಿಸ್ತøತ ಯೋಜನಾ ವರದಿ ತಯಾರಿಸಲು ಸೂಚಿಸಿದ್ದಾರೆ. ಇದೀಗ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿರುವುದರಿಂದ ಮುಂದೊಂದು ದಿನ ಜಿಲ್ಲೆಯು ವಿಶ್ವದ ಭೂಪಟದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೊಂದಿಗೆ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸಲು ಶ್ರಮಿಸುತ್ತಿದೆ.  ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಜನರ ಆಶೋತ್ತರಗಳನ್ನು ಈಡೇರಿಸಲಾಗಿದೆ ಎಂದರು.

ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯಲ್ಲಿ 22ಲಕ್ಷ ಕುಟುಂಬಗಳಿಗೆ ಅನುಕೂಲಕರವಾಗಿದ್ದು, ಇದಕ್ಕಾಗಿ 474 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.  ಅದೇ ರೀತಿ ಶಕ್ತಿ ಯೋಜನೆಯಡಿ ಜಿಲ್ಲೆಯ 10 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 302 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ಮಾಹೆ 2,000 ರೂ.ಗಳಂತೆ 1673 ಕೋಟಿ ರೂ. ಜಮೆ ಮಾಡಲಾಗಿದ್ದು, 6ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.  ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‍ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸಲು 284 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 7.74 ಲಕ್ಷ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡ 4924 ನಿರುದ್ಯೋಗಿಗಳಿಗೆ 8.42 ಕೋಟಿ ರೂ. ನಿರುದ್ಯೋಗಿ ಭತ್ಯೆಯನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಪಂಚ ಗ್ಯಾರಂಟಿಗಳಿಗಾಗಿ ಇದುವರೆಗೆ ರಾಜ್ಯದಲ್ಲಿ 2742 ಕೋಟಿ ರೂ.ಗಳು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಲವು ವಾರ್ಡ್‍ಗಳನ್ನು ಮಾತ್ರ ಅಭಿವೃದ್ಧಿಪಡಿಸಲಾಗಿದ್ದು, ಉಳಿದ ವಾರ್ಡುಗಳನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರಲ್ಲದೆ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗೊಲ್ಲರಹಟ್ಟಿ, ಲಂಬಾಣಿತಾಂಡ, ಕಾಲೋನಿ ಸೇರಿದಂತೆ ದಾಖಲೆರಹಿತ ಜನವಸತಿ ಪ್ರದೇಶ ಗಳಲ್ಲಿ ವಾಸಿಸುವ  ದುರ್ಬಲ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲು 2,000 ಹಕ್ಕು ಪತ್ರಗಳನ್ನು ಈ ಕಾರ್ಯಕ್ರಮದ ಮೂಲಕ ವಿತರಿಸಲಾಗಿದೆ.  ಜಿಲ್ಲೆಯಲ್ಲಿ 522 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ, ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು 520 ಪ್ರಾಥಮಿಕ ಹಾಗೂ 450 ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.IMG 20241202 WA0005

ಇತರೆ ಜಿಲ್ಲೆಗಳಲ್ಲಿಯೂ ಜನ ಕಲ್ಯಾಣ ಕಾರ್ಯಕ್ರಮ :

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ನಮ್ಮ ಸರ್ಕಾರದ ಸಾಧನೆಗೆ ನೆರೆದಿರುವ ಜನಸ್ತೋಮವೇ ಸಾಕ್ಷಿ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತಿಯಿಂದ ಎಲ್ಲಾ ಇಲಾಖೆ, ನಿಗಮ, ಮಂಡಳಿಗಳು ಸಾವಿರಾರು ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುತ್ತಿರುವುದು ಸರ್ಕಾರಕ್ಕೆ ಸಂತಸ ತಂದಿದೆ.  ಇಂತಹ ಜನಕಲ್ಯಾಣ ಕಾರ್ಯಕ್ರಮಗಳು ಇತರೆ ಜಿಲ್ಲೆಗಳಲ್ಲಿಯೂ ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಕ್ರಾಂತಿಯೋಗಿ ಬಸವಣ್ಣ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಕರ್ಮಭೂಮಿಯಾದ ರಾಜ್ಯದ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳು ಶಕ್ತಿ ನೀಡಿದೆ.  ಸರ್ಕಾರ ಅಧಿಕಾರಕ್ಕೆ ಬಂದಾಗ ಹತ್ತಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಭೂಸ್ವಾಧೀನ, ಹಕ್ಕುಪತ್ರ ವಿತರಣೆ ಸಾಧನೆ ಮಾಡಿದ ಕಂದಾಯ ಇಲಾಖೆಗೆ ಅಭಿನಂದನೆ ತಿಳಿಸಿದರಲ್ಲದೆ, ಜಿಲ್ಲೆಗೆ ಕುಡಿಯುವ ನೀರು ಒದಗಿಸಲು ನೀರಾವರಿ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಜಿಲ್ಲೆಯ 7 ಶಾಸಕರನ್ನು ಆಯ್ಕೆ ಮಾಡಿ ಸರ್ಕಾರದ ಅಭ್ಯುದಯಕ್ಕೆ ಕಾರಣರಾಗಿ ಆಡಳಿತವನ್ನು ಮುನ್ನೆಡೆಸಲು ಶಕ್ತಿ ನೀಡಿದ ಈ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದೆ.  ಜನರು ನಮ್ಮ ಸರ್ಕಾರವನ್ನು ನಂಬಿ ಗೆಲ್ಲಿಸಿದ್ದಾರೆ.  ಜನರ ನಂಬಿಕೆಯನ್ನು ಹುಸಿ ಮಾಡುವುದಿಲ್ಲವೆಂದು ಭರವಸೆ ನೀಡಿದರು.

ಟೀಕಾಕಾರರಿಗೆ ಉತ್ತರ ನೀಡುತ್ತೇವೆ :

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಜಿಲ್ಲೆಯ ರೈತರ, ಬಡವರ, ದೀನದಲಿತರ ಅಭ್ಯುದಯಕ್ಕಾಗಿ ಏರ್ಪಡಿಸಿರುವ ಜಿಲ್ಲೆಯ ಈ ಕಾರ್ಯಕ್ರಮ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.  ಬಡವರ ಹಸಿವನ್ನು ನೀಗಿಸುವ ಮನಸ್ಥಿತಿ ನಮ್ಮ ಸರ್ಕಾರಕ್ಕಿದೆ.  ಬಡವರ ಪರವಾಗಿರುವ ಈ ಸರ್ಕಾರ ನುಡಿದಂತೆ ನಡೆದಿದೆ.  ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲವೆಂಬ ಟೀಕಾಕಾರರ ಮಾತುಗಳಿಗೆ ಬೀಗ ಹಾಕಿದಂತಾಗಿದೆ. ಯಾವುದೇ ಸರ್ಕಾರ ಇಂತಹ ಆಡಳಿತ ನೀಡಿಲ್ಲ.  ರಾಜ್ಯದ ಇತರೆ  ಜಿಲ್ಲೆಗಳಲ್ಲಿಯೂ ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡುತ್ತೇವೆ ಎಂದು ತಿಳಿಸಿದರು.DSC 3277

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಬಿ.ಸುರೇಶ್‍ಗೌಡ, ಹೆಚ್.ವಿ.ವೆಂಕಟೇಶ್, ಕೆ.ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಡಿ.ಟಿ.ಶ್ರೀನಿವಾಸ್, ಸಿ.ಬಿ. ಸುರೇಶ್ ಬಾಬು, ಆರ್.ರಾಜೇಂದ್ರ, ಚಿದಾನಂದ ಎಂ.ಗೌಡ, ಮಾಜಿ ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಹಾಗೂ ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಅಧ್ಯಕ್ಷ ಚಂದ್ರಶೇಖರ್, ಸರ್ಕಾರದ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೇರಿದಂತೆ ಮತ್ತಿತರ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *