ಐತಿಹಾಸಿಕ ನೀಲಕಂಠೇಶ್ವರ ದೇವಸ್ಥಾನದ ಭೂಮಿಯ ಸ್ಥಳ ಪರಿಶೀಲನೆ ಮಾಡಿದ ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ.
ಪಾವಗಡ: ಪಟ್ಟಣದ ನೀಲಕಂಠೇಶ್ವರ ಸ್ವಾಮಿ ದೇವಾಲಯದ ಭೂಮಿಯ ಸ್ಥಳವನ್ನು ಅತಿಕ್ರಮ ಮಾಡಲಾಗಿದೆ ಎಂಬ ದೂರನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದು.
ಇದರ ಹಿನ್ನೆಲೆ ಮಧುಗಿರಿ
ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ ಬುಧವಾರ ಜಿಲ್ಲಾಧಿಕಾರಿಗಳ ಆದೇಶದಂತೆ ನೀಲಕಂಠೇಶ್ವರ ಸ್ವಾಮಿ ದೇವಾಲಯದ ಭೂಮಿಯ ಸ್ಥಳವನ್ನು ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ
ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ಭೇಟಿ ನೀಡಿದ್ದೇನೆ. ಪಾವಗಡ ಸರ್ವೆ ನಂಬರ್ 72 ಮತ್ತು 74ಕ್ಕೆ ಸಂಬಂಧಪಟ್ಟಂತೆ ಸ್ಥಳ ಪರಿಶೀಲಿಸಿ ಸರ್ವೆ ಸ್ಕೆಚ್ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು
ಸಾಸಲು ಚಿನ್ನಮ್ಮ ದೇವಸ್ಥಾನದ ಸ್ಥಳವನ್ನು ಅಕ್ರಮ ದಾಖಲೆ ಸೃಷ್ಟಿಸಿ ಭೂಕಬಳಿಕೆ ಮಾಡಲಾಗಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ರವರು ಸ್ಥಳ ಪರಿಶೀಲನೆ ನಡೆಸಿದರು
ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ರವರಿಗೆ ದೂರಿಗೆ ಸಂಬಂಧಿಸಿದ ದಾಖಲೆ ಹಾಗೂ ಸಂಪೂರ್ಣ ವರದಿಯನ್ನು ನೀಡುವಂತೆ ಸೂಚಿಸಿದರು
ಈ ಸಂದರ್ಭದಲ್ಲಿ ತಹಸೀಲ್ದಾರ್ ವರದರಾಜು ಕಂದಾಯ ನಿರೀಕ್ಷಕ ರಾಜಗೋಪಾಲ್, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಷಂಷುದ್ದೀನ್, ಗ್ರಾಮ ಆಡಳಿತಾಧಿಕಾರಿ ರಾಜೇಶ್ , ಕನ್ನಮೇಡಿ ಕೃಷ್ಣಮೂರ್ತಿ, ಅಮ್ ಆದ್ಮಿ ರಾಮಾಂಜಿನಪ್ಪ, ಬೇಕರಿ ನಾಗರಾಜ್,ಸೇರಿದಂತೆ ಇತರರು ಉಪಸ್ಥಿತರಿದ್ದರು
ವರದಿ : ಶ್ರೀನಿವಾಸಲು ಎ