ಭ್ರಷ್ಟಾಚಾರ ತಡೆಗೆ. ಅಗ್ರಹ.
ಪಾವಗಡ : ಕಂದಾಯ ಇಲಾಖೆ ಮತ್ತು
ಉಪ ನೊಂದನಾಧಿಕಾರಿಗಳ ಕಾರ್ಯಾಲಯದ ಕೆಲಸ ಸಿಬ್ಬಂದಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಆರೋಪಿಸಿದ್ದಾರೆ.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ವರದರಾಜರವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿ ತಹಶೀಲ್ದಾರ್ ವರದರಾಜು ಮಾತನಾಡಿ, ಅಧಿಕಾರಿಗಳು ಕೆಲಸ ಮಾಡದೆ ಇದ್ದಾಗ ತನ್ನ ಗಮನಕ್ಕೆ ತರಬೇಕೆಂದು.
ಯಾವುದೇ ಸಾರ್ವಜನಿಕ ಕೆಲಸಕ್ಕೆ ಹಣ ಕೊಡುವುದು, ಹಣ ತೆಗೆದುಕೊಳ್ಳುವುದು ಎರಡು ಸಹ ಕಾನೂನು ರೀತಿಯಲ್ಲಿ ಅಪರಾಧ ಎಂದರು.
ಆಡಳಿತದಲ್ಲಿ ಸಕಾಲ ಯೋಚನೆ ಮೂಲಕ ಕೆಲಸ ಕಾರ್ಯಗಳು ನಡೆಯುತ್ತವೆ ಎಂದು.
ಸಕಾಲದಲ್ಲಿ ಅರ್ಜಿ ಸಲ್ಲಿಸಿದಾಗ ಯಾವುದೇ ಅಧಿಕಾರಿ ವಿಳಂಬ ಮಾಡಲು ಸಾಧ್ಯವಿಲ್ಲವೆಂದರು.
ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಮಾತನಾಡಿ.
ಕಂದಾಯ ಇಲಾಖೆ ಮತ್ತು ಉಪ ನೊಂದನಾಧಿಕಾರಿಗಳ ಕಾರ್ಯಾಲಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.
ತಾಲ್ಲೂಕು ಕಚೇರಿ ಮತ್ತು ಉಪ ನೊಂದನಾಧಿಕಾರಿಗಳ ಕಾರ್ಯಾಲಯದಲ್ಲಿ ಮಧ್ಯವರ್ತಿಗಳಿಲ್ಲದೆ ಯಾವ ಕೆಲಸವೂ ಆಗುತ್ತಿಲ್ಲ
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಆರೋಪಿಸಿದರು.
ಕಂದಾಯ ಇಲಾಖೆಯ ಕೆಲ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಹಾಗೂ ಭೂಮಿ ಕೇಂದ್ರದಲ್ಲಿರುವ ಅಧಿಕಾರಿಗಳು, ಸರ್ವೆ ಇಲಾಖೆ ಅಧಿಕಾರಿಗಳು ಲಂಚ ಕೊಡದೆ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ ಎಂದು .
ರೈತರು ಮುಖಂಡರುಗಳು ಕಚೇರಿಗಳಿಗೆ ಹೋಗಿ ಕೇಳಿದರೆ ಉಡಾಫೆ ಉತ್ತರ ನೀಡುತ್ತಾರೆ ಎಂದರು.
ಕೆಲ ಇಲಾಖೆಗಳಲ್ಲಿ ಅಧಿಕಾರಿಗಳು ಸುಮಾರು ವರ್ಷಗಳಿಂದ ತಾಲ್ಲೂಕಿನಲ್ಲಿಯೇ ಬೀಡು ಬಿಟ್ಟಿರೋದು ಭ್ರಷ್ಟಾಚಾರಕ್ಕೆ ಅನುವು ಮಾಡಿ ಕೊಟ್ಟಂತಾಗಿದೆ ಎಂದರು.
ಈ ತಕ್ಷಣ ಸಂಬಂಧಪಟ್ಟ ಮೇಲಾಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳ ಜೊತೆ ಸೇರಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹನುಮಂತರಾಯಪ್ಪ, ಜಿಲ್ಲಾ ಕಾರ್ಯದರ್ಶಿ ಎಲ್ ರಾಮಾಂಜನೇಯ, ತಾಲ್ಲೂಕು ಅಧ್ಯಕ್ಷ ಶಿವು.
ರಾಷ್ಟ್ರೀಯ ಕಿಸಾನ್ ಅಧ್ಯಕ್ಷ ಕೃಷ್ಣರಾವ್, ಸಿದ್ದಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನರಸಣ್ಣ, ತಾಲ್ಲೂಕು ಕಾರ್ಯದರ್ಶಿ ರಮೇಶ್ ಗುಂಡ್ಲಹಳ್ಳಿ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಗೋವಿಂದಪ್ಪ, ಈರಣ್ಣ ಚನ್ನರಾಯಪ್ಪ, ತಾಲ್ಲೂಕು ಗೌರವಾಧ್ಯಕ್ಷ ಪಾತಣ್ಣ, ತಾಲ್ಲೂಕು ಸಂಚಾಲಕ ನಡಿಪಣ್ಣ,ಚಿಕ್ಕಣ್ಣ, ವೆಂಕಟಸ್ವಾಮಿ, ಸದಾಶಿವಪ್ಪ, ನಾಗರಾಜಪ್ಪ, ಹಾಗೂ ತಾಲೂಕು ರೈತ ಸಂಘದ ಪದಾಧಿಕಾರಿಗಳು ಮುಖಂಡರು ಹಾಜರಿದ್ದರು.