IMG 20250128 WA0020 scaled

Karnataka : ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು….!

Genaral STATE

*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು*

1. ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

2. ಮೂಲಸೌಲಭ್ಯ ವಲಯದ ಪಿಪಿಪಿ ಯೋಜನೆಗಳ ನೀತಿ, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

3. ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ಸಂ: 3 ರ ಬದಲಿಗೆ ರಸ್ತೆ ಮೇಲ್ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

4. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 44.50 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

5. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ತಾಲ್ಲೂಕು, ಬಿಡದಿ ಹೋಬಳಿಯ ವಿವಿಧ ಗ್ರಾಮಗಳು ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಬಾಗಶಃ ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ” ಯೋಜನೆಯನ್ನು ಅನುಷ್ಟಾನಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

6. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಲೇಜು ಕಟ್ಟಡಗಳನ್ನು 304 ಕೋಟಿ ರೂ.ಗಳ ಅಂದಾಜು ಹಾಗೂ ಪ್ರಧಾನಮಂತ್ರಿ ಜನವಿಕಾಸ ಯೋಜನೆಯಡಿ 12 ವಸತಿ ಶಾಲೆ/ವಿದ್ಯಾರ್ಥಿನಿಲಯಗಳನ್ನು 191.19 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

7. ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಆಕರಿಸುತ್ತಿರುವ ಮಾರುಕಟ್ಟೆ ಶುಲ್ಕ/ ಬಳಕೆದಾರರ ಶುಲ್ಕವನ್ನು ಮರುಹಂಚಿಕೆ ಮಾಡಲಾಗಿದ್ದು, ಮೂರು ಪೈಸೆಯನ್ನು ಮಾರುಕಟ್ಟೆ ಅಭಿವೃದ್ದಿ ನೆರವು ನಿಧಿಗೆ ವಂತಿಗೆ ನೀಡಲು ನಿರ್ಣಯಿಸಲಾಗಿದೆ.

 

8. ಎಲ್.ಕೆ ಅತೀಕ್ , ಐ.ಎ.ಎಸ್ ಇವರ ನ್ನು ನಿವೃತ್ತ ನಂತರ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿರಗೆ ಆಧಾರದಲ್ಲಿ ಮುಂದುವರೆಸಲು ದಿನಾಂಕ 20-1-2025 ರಂದು ಅಧಿಸೂಚನೆ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

 

9. ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ದಿನಾಂಕ 29-01-2025 ರಂದು ಹೊರಡಿಸಿರುವ ಅಧ್ಯಾದೇಶ, 2025 ನ್ನು ಅನುಷ್ಠಾನಗೊಳಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದ್ದು, ರಾಜ್ಯಪಾಲರು ಇದಕ್ಕೆ ಅಂಕಿತವನ್ನು ಹಾಕಿದ್ದು, ಅದರಂತೆ ಸರ್ವೋಚ್ಛ ನ್ಯಾಯಾಲಯ 10-12-2024 ರಂದು ನೀಡಿರುವ ತೀರ್ಪಿನಲ್ಲಿ ಸದರಿ ಜಮೀನಿಗೆ ಟಿಡಿಆರ್ ಮೂಲಕ ಪರಿಹಾರ ನಿಗದಿಪಡಿಸಿರುವ ಮೌಲ್ಯವು, ರಸ್ತೆ ವಿಸ್ತರಣೆ ಯೋಜನೆಯನ್ನು ಆರ್ಥಿಕವಾಗಿ ಕಾರ್ಯಸಾಧುವಲ್ಲದಂತೆ ಮಾಡಿದೆ. ಹಾಗೂ ಸಾರ್ವಜನಿಕ ಹಿತಾಸಕ್ತಿ ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿದೆ. ಬೆಂಗಳೂರು ನಗರದ, ನಗರ ಯೋಜನೆಗೆ ಕಠಿಣ ಸವಾಲು ಒಡ್ಡುತ್ತದೆ. ಆದ್ದರಿಂದ ರಾಜ್ಯದ ಮೇಲಾಗುವ ತೀವ್ರ ಪರಿಣಾಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೇಲೆ ಬೆಂಗಳೂರು ರಸ್ತೆ ಅಗಲೀಕರಣದ ಯೋಜನೆಯನ್ನು ಬೆಂಗಳೂರು ಅರಮನೆ ಮೈದಾನ ಬಳಕೆ ಮತ್ತು ನಿಯಂತ್ರಣ ಅಧ್ಯಾದೇಶ 2025ಎಂದು ಕಲಂ3 ರಂತೆ ಕೈಬಿಡಲು ಹಾಗೂ ಯೋಜನೆಗೆ ಬಳಸದೇ ಇರುವ ಬೆಂಗಳೂರು ಮಹಾನಗರ ಪಾಲಿಕೆ ವೆಚ್ಚದಲ್ಲಿ ಪೂರ್ವಸ್ಥಿತಿ ತರಲು ಈಗಾಗಲೇ ಜಯಮಹಲ್ ರಸ್ತೆಯ ಅಂಡರ್ ಪಾಸ್ ಗಾಗಿ ಉಪಯೋಗಿಸಿಕೊಂಡಿರುವ 1217.41 ಚ.ಮೀ ವಿಸ್ತೀರ್ಣದ ಜಮೀನನ್ನು ಹಿಂತಿರುಗಿಸಲು ಸಾಧ್ಯವಾಗದೇ ಇರುವುದರಿಂದ ಬೆಂಗಳೂರು ಅರಮನೆ ಮೈದಾನದ ಬಳಕೆ ಮತ್ತು ನಿಯಂತ್ರಣ ಅಧ್ಯಾದೇಶ ಕಲಂ 2025 ಕಲಂ 4 ಮತ್ತು 5ರನ್ವಯ ಕ್ರಮ ಕೈಗೊಳ್ಳಲು ಸರ್ವೋಚ್ಛ ನ್ಯಾಯಾಲಯದ 10-12-2024 ತೀರ್ಪಿನಂತೆ ಸದರಿ ಪ್ರಕರಣದ ವೆಚ್ಚವನ್ನು ಒಂದು ಲಕ್ಷದಂತೆ ದೂರುದಾರರಿಗೆ ಪಾವತಿಸಲು ಬಿಬಿಎಂಪಿ ವತಿಯಿಂದ ಪಾವತಿಸಲು ಸಚಿವ ಸಂಪುಟ ನಿರ್ಣಯಿಸಿದೆ.

 

10 ಅರಣ್ಯ , ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಟ್ಟು 5678-32 ಎಕರೆ-ಗುಂಟೆ(2298.18 ಹೆಕ್ಟೇರ್) ಪ್ರದೇಶಗಳನ್ನು ವನ್ಯಜೀವಿ 9ಸಂರಕ್ಷಣಾ) ಅಧಿನಿಯಮ, 1972 ರ ಕಲಂ 36(ಎ) ರನ್ವಯ ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.

11. ವಿಶ್ವ ಬ್ಯಾಂಕ್ ನೆರವಿನ ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮವನ್ನು 5000.ಕೋಟಿ : ವಿಶ್ವ ಬ್ಯಾಂಕ್ ಸಾಲ- 3500 ಕೋಟಿ ಹಾಗೂ ರಾಜ್ಯ ಸರ್ಕಾರದ 1500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಸಚಿವ ಸಂಪುಟ ನಿರ್ಣಯಿಸಿತು.

Leave a Reply

Your email address will not be published. Required fields are marked *