IMG 20250130 WA0029

Karnataka : ಮೈಕ್ರೋ ಫೈನಾನ್ಸ್‌ – ಮೀಟರ್ ಬಡ್ಡಿ ದಂಧೆ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ….!

Genaral STATE

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:

• ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ.IMG 20250130 WA0031

• ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು.

• ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ.

• ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ.

• ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ.

• ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು.