ಸಾಲ ಕೊಡುವವರು ಆರ್‌ಬಿಐ ನಿಯಮಾವಳಿಯನ್ನು ಪಾಲಿಸಬೇಕು.
ಪಾವಗಡ : ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ಸಾಲ ನೀಡಬೇಕಾದರೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಗ್ರಾಹಕರಿಗೆ ಹಣವನ್ನು ನೀಡಬೇಕು ಎಂದು ತಹಶೀಲ್ದಾರ್ ವರದರಾಜು ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯ ಪ್ರತಿನಿಧಿಗಳ ಜೊತೆ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮೈಕ್ರೋ ಫೈನಾನ್ಸ್ ನಿಂದ ಸಾಲ ನೀಡಿದವರು ಸಾಲ ವಸೂಲಿಗಾಗಿ ಬೆಳಗ್ಗೆ 09 ರಿಂದ 6:00 ಗಂಟೆ ವರೆಗೂ ವಸೂಲಿ ಮಾಡಿಕೊಳ್ಳಬಹುದು ಎಂದರು.
ಸಾಲ ಕೊಟ್ಟ ಮೈಕ್ರೋ ಫೈನಾನ್ಸ್ ಸಿಬ್ಬಂದಿಯು ಗ್ರಾಹಕರ ಮನ ಬಳಿ ಹೋಗಿ ಅವಾಚ್ಯ ಶಬ್ದಗಳನ್ನು ಬಳಸುವಂತಿಲ್ಲ ಎಂದರು.
ಸಾಲಗಾರರಿಗೆ ಕಿರುಕುಳ ನೀಡಿದಲ್ಲಿ ಮೈಕ್ರೋ ಫೈನಾನ್ಸ್’ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಂದರು.
ಆರ್.ಬಿ.ಐ ವಿಧಿಸಿರುವ ಷರತ್ತುಗಳ ಅನ್ವಯ ಸಾಲ ನೀಡಬೇಕು, ಮತ್ತು ಷರತ್ತುಗಳನ್ನು ಉಲ್ಲಂಘಿಸಿ ಸಾಲ ನೀಡುವಂತಿಲ್ಲ, ಮತ್ತು ಕಾನೂನು ವಿರುದ್ಧವಾಗಿ ಸಾಲ ವಸೂಲಿ ಮಾಡುವಂತಿಲ್ಲ.
ಅರ್ಹರಿಗೆ ಮಾತ್ರ ಸಾಲ ನೀಡಬೇಕು, ಫೈನಾನ್ಸ್ ಕಂಪನಿಗಳು ಸಾಲ ನೀಡುವಾಗ ಕಡ್ಡಾಯವಾಗಿ ಆರ್.ಬಿ.ಐ ಮಾರ್ಗಸೂಚಿಗಳನ್ನು ಪಾಲಿಸಬೇಕು.
ಒಬ್ಬ ವ್ಯಕ್ತಿ ಗರಿಷ್ಠ 3ಲಕ್ಷದವರೆಗೆ 4 ಬಾರಿ ಮಾತ್ರ ಸಾಲ ಪಡೆಯಲು ಅವಕಾಶವಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಹಣ ನೀಡುವಂತಿಲ್ಲ ಎಂದರು.
ಈ ಸಂದರ್ಭದಲ್ಲಿ ಸಿಪಿಐ ಸುರೇಶ್, ಸಿ ಐ ಗಿರೀಶ್, ಹಾಗೂ ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ಶ್ರೀನಿವಾಸಲು ಎ