ಕೊತ್ತೂರು ಗಂಗಮ್ಮನಿಗೆ ಒಲಿದ 2025ರ ಕಾಯಕ ಬಂಧು ಪ್ರಶಸ್ತಿ.
ಪಾವಗಡ : ತಾಲ್ಲೂಕಿನ ಸಿ ಕೆ ಪುರ ಗ್ರಾಂ. ಪಂ. ವ್ಯಾಪ್ತಿಯ ಕೊತ್ತೂರು ಗ್ರಾಮದ ಗಂಗಮ್ಮನಿಗೆ 2025ರ ಕಾಯಕ ಬಂಧು ಪ್ರಶಸ್ತಿ ಲಭಿಸಿದೆ.
ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ ತುಮಕೂರು ಜಿಲ್ಲಾ ಪಂಚಾಯಿತಿಗೆ 2025ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟಿ ಪ್ರಶಸ್ತಿ ಸೇರಿ ಮೂರು ಪ್ರಶಸ್ತಿಗಳು ಲಭಿಸಿವೆ.
ಪಾವಗಡ ತಾಲೂಕಿನ ಸಿ ಕೆ ಪುರ ಗ್ರಾಮ ಪಂಚಾಯಿತಿಯ ಗಂಗಮ್ಮ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 329 ಕುಟುಂಬಗಳಿಗೆ ಉದ್ಯೋಗ ಕೊಡಿಸಿದ್ದು, ಇದರಲ್ಲಿ 246 ಕುಟುಂಬಗಳು 100 ದಿನಗಳ ನರೇಗಾ ಕೂಲಿಯನ್ನು ಮುಗಿಸುವಲ್ಲಿ ಯಶಸ್ವಿಯಾಗಿದಾರೆ .
ಈ ಕಾರಣದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಪಡಿಸುವ ನಿಟ್ಟಿನಲ್ಲಿ ಸಾಧನೆ ಮಾಡಿದ ಗಂಗಮ್ಮನವರಿಗೆ ಮೇಟಿ (ಕಾಯಕ ಬಂಧು) ಪ್ರಶಸ್ತಿ ಲಭಿಸಿದೆ.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಉಪ ಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ ಕೆ.ಪಿ. ಸೇರಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
ವರದಿ : ಶ್ರೀನಿವಾಸಲು ಎ