Session Photos 03 03 2025 2

Karnataka : ರಾಜ್ಯದ ಅಭಿವೃದ್ಧಿ ವೇಗವನ್ನು ಚುರುಕುಗೊಳಿಸಿ, ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ  ಸರ್ಕಾರ ಯಶಸ್ವಿ ..!

Genaral STATE

ರಾಜ್ಯದ ಅಭಿವೃದ್ಧಿ ವೇಗವನ್ನು ಚುರುಕುಗೊಳಿಸಿ, ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ  ಸರ್ಕಾರ ಯಶಸ್ವಿ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಮಾರ್ಚ್ 03 (ಕರ್ನಾಟಕ ವಾರ್ತೆ):  ರಾಜ್ಯದ ಅಭಿವೃದ್ಧಿ ವೇಗವನ್ನು ಚುರುಕುಗೊಳಿಸುವಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಮಹಾತ್ಮ ಗಾಂಧಿಯವರು ಹೇಳಿದಂತೆ ಕಟ್ಟಕಡೆಯ ವ್ಯಕ್ತಿಗೆ ಯೋಜನೆಗಳನ್ನು  ತಲುಪಿಸುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಆರಂಭವಾದ ವಿಧಾನಮಂಡಲದ ಅಧಿವೇಶನದ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಕರ್ನಾಟಕ ಮಾದರಿ ಅಭಿವೃದ್ಧಿಯೆಂದರೆ ಜನಕೇಂದ್ರಿತ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಆಡಳಿತವನ್ನು ರೂಪಿಸುವುದು ಎಂದರ್ಥ. ಹಸಿರು ಇಂಧನ, ಮಹಿಳಾ ಸಬಲೀಕರಣ ಮುಂತಾದವುಗಳೂ ಇದರಲ್ಲಿ ಸೇರುತ್ತವೆ. ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ. ಆಕ್ಸ್‍ಫರ್ಡ್ ವಿಶ್ವವಿದ್ಯಾಲಯವು ಹ್ಯೂಮನ್ ರೈಟ್ಸ್ ಹಬ್‍ನ ಬ್ಲಾಗ್‍ನಲ್ಲಿ “ಶೈನಿಂಗ್ ಎ ಲೈಟ್ ಇನ್ ದ ಡಾರ್ಕ್‍ನೆಸ್” ಎಂದು ಮತ್ತು “ಎ ಬ್ಲ್ಯೂ ಪ್ರಿಂಟ್ ಫಾರ್ ದ ವಲ್ರ್ಡ್” ಎಂದು ಈ ಮಾದರಿಯನ್ನು ವ್ಯಾಖ್ಯಾನಿಸಿವೆ. ಈ ಪ್ರಮೇಯದ ಕುರಿತು ತಿಳಿದುಕೊಳ್ಳಲು ವಿಶ್ವ ಸಂಸ್ಥೆಯ ಮುಖ್ಯಸ್ಥರೆ ರಾಜ್ಯಕ್ಕೆ ಬಂದು ನಮ್ಮ ಯೋಜನೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ ಎಂದು ಹೇಳಿದರು.

ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ರಾಜ್ಯದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಪ್ರತಿಯೊಂದು ವಲಯದಲ್ಲೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುμÁ್ಠನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಜಿಎಸ್‍ಟಿ ಬೆಳವಣಿಗೆ ದರ ಉತ್ತಮವಾಗಿದೆ.
2024-25ನೇ ಸಾಲಿನ ಬಜೆಟ್‍ನಲ್ಲಿ ಆದೇಶ ಹೊರಡಿಸಬೇಕಾಗಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಘೋಷಣೆ ಮಾಡಿದ್ದ ಕಾರ್ಯಕ್ರಮಗಳೂ ಸಹ ಸಮರ್ಪಕವಾಗಿ ಅನುμÁ್ಠನವಾಗುತ್ತಿವೆ. ಇನ್ನುಳಿದ ಘೋಷಣೆಗಳೂ ಆದೇಶ ಹೊರಡಿಸುವ ಹಂತದಲ್ಲಿವೆ ಎಂದು ತಿಳಿಸಿದರು.

ರೈತರ ಆತ್ಮಹತ್ಯೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ :
ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ತೀವ್ರರೂಪದ ಅತಿವೃಷ್ಟಿ ಅನಾವೃಷ್ಟಿಗಳಿಲ್ಲದ ಕಾರಣ ರೈತರ ಕೈಗೆ ಉತ್ತಮ ಫಸಲು ಸಿಕ್ಕಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಂದ ಸುಮಾರು 149 ಲಕ್ಷ ಟನ್ನುಗಳಷ್ಟು ಕೃಷಿ ಉತ್ಪಾದನೆ ನಿರೀಕ್ಷಿಸಲಾಗಿದೆ. ಸರ್ಕಾರವು ತೆಗೆದುಕೊಂಡ ಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ರೈತ ಕುಟುಂಬಗಳಲ್ಲಿ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ನನ್ನ ಸರ್ಕಾರವು ರಚನೆಯಾದಾಗಿಂದಲೂ ತೊಗರಿ ಮತ್ತು ಕೊಬ್ಬರಿಗೆ ಬೆಲೆಗಳು ಕುಸಿದಾಗ ರೈತರ ನೆರವಿಗೆ ನಿಂತು ಪೆÇ್ರೀತ್ಸಾಹ ಧನವನ್ನು ನೀಡಿದೆ. ಕೃಷಿ ಭಾಗ್ಯ ಯೋಜನೆಯನ್ನು ಮುಂದುವರೆಸುವ ಮೂಲಕ ಅಗತ್ಯ ಇರುವ ಕಡೆಗಳಲ್ಲೆಲ್ಲಾ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.Session Photos 03 03 2025 10

ದೇವಿಕಾ ರಾಣಿ ನಿಕೋಲಾಸ್ರೋರಿಚ್572 ಎಕರೆ ಎಸ್ಟೇಟ್ ಅನ್ನು ಪ್ರವಾಸಿಗರ ಆಕರ್ಷಣೆಗೆ ಮತ್ತು ವಿಶ್ವದರ್ಜೆಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರದ SಂSಅI ಯೋಜನೆಯಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕರ್ನಾಟಕ ಸರ್ಕಾರವು ಸಹ ತನ್ನ ವಿಶೇಷ ಅನುದಾನದ ಮೂಲಕ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುತ್ತದೆ.
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಜಾರಿ :
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ನಿಮಿತ್ತ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು ಬಸ್ ಪಾಸ್ ವಿತರಿಸುವ ಯೋಜನೆಯನ್ನು ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಅನುμÁ್ಠನಗೊಳಿಸಲಾಗಿದೆ. ಸರ್ಕಾರವು ತನ್ನ ಪರಿಮಿತ ಆರ್ಥಿಕ ಸಂಪನ್ಮೂಲಗಳ ಆಧಾರದ ಮೇಲೆಯೆ ಇμÉ್ಟಲ್ಲ ಸಾಧನೆಗಳನ್ನು ಮಾಡಿದೆ. ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿದೆ. ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕøತಿಕವೂ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುμÁ್ಠನ ಮಾಡುತ್ತಿದೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಜನಕಲ್ಯಾಣವನ್ನೆ ಪ್ರಧಾನ ಧ್ಯೇಯವಾಗಿಟ್ಟುಕೊಂಡು ಕೆಲಸ ಮಾಡುತ್ತಿದೆ. ಸರ್ವರ ಶಾಂತಿ, ಸರ್ವರ ಅಭ್ಯುದಯವೇ ಸಂವಿಧಾನದ ಆಶಯ. ಈ ಆಶಯವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *