ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ವಾಪಸ್ಸು ಪಡೆದಿದ್ದಾರೆ: ಕಂದಾಯ ಸಚಿವ ಕೃಷ್ಣಬೈರೇಗೌಡ
ಬೆಂಗಳೂರು, ಮಾರ್ಚ್ 4(ಕರ್ನಾಟಕ ವಾರ್ತೆ):ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ವಾಪಸ್ಸು ಪಡೆದಿದ್ದಾರೆ. ಅವರಿಗೆ ಆಡಳಿತದ ಕರ್ತವ್ಯ ನಿರ್ವಹಿಸಲು ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಾದ ಟಿ.ಬಿ.ಜಯಚಂದ್ರ ಅವರು ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಸೌಲಭ್ಯಗಳ ಮಂಜೂರಾತಿ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿರುವ ಬಗ್ಗೆ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, 4 ಸಾವಿರ ಲ್ಯಾಪ್‌ಟಾಪ್ ವಿತರಿಸಲಾಗಿದೆ.4.50 ಕೋಟಿ ವೇತನ ನೀಡಿದ್ದೇವೆ. ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕೆಲಸ ನಿರ್ವಹಿಸಲು ಸೌಲಭ್ಯ ಕಲ್ಪಿಸಲಾಗುವುದು ಹಾಗೂ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಾಗುವುದು.
51 ಲಕ್ಷ 88 ಸಾವಿರ ಜಮೀನುಗಳು ಮೃತರ ಹೆಸರಿನಲ್ಲಿದ್ದು, ಖಾತೆ ಆಗಿಲ್ಲ ಎಂದರು