IMG 20250310 WA0052

Karnataka : ಮೀಟರ್ ಬಡ್ಡಿ ದಂಧೆ ಗೆ ಬಿತ್ತು‌ ಅಂಕುಶ…!

Genaral STATE

*ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ*

ಬೆಂಗಳೂರು, ಮಾರ್ಚ್ 10 (ಕರ್ನಾಟಕ ವಾರ್ತೆ):ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025 ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಹೆಚ್.ಕೆ. ಪಾಟೀಲ್ ರವರು ವಿಧೇಯಕದ ಕುರಿತು ಸದನದಲ್ಲಿ ಪ್ರಸ್ತಾಪಿಸುತ್ತಾ ಕಿರುಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳು ಸಾಲಗಾರ ಸಮೂಹಗಳಾದಂತಹ

ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ ಮತ್ತು ಉಸಿರುಗಟ್ಟಿಸುತ್ತಿವೆ. ಸಾಲಗಾರನಿಗೆ ಬಡ್ಡಿಯ ಕುರಿತಂತೆ ಕೆಲವೊಮ್ಮೆ ದುಪ್ಪಟ್ಟು ಮೊತ್ತವನ್ನು ಅಥವಾ ಹೆಚ್ಚಿನ ಬಡ್ಡಿಯ್ನು ಪಾವತಿಸಲು ಒತ್ತಾಯಿಸಲಾಗುತ್ತಿದೆ.

ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಪಡಿಸಲಾಗುತ್ತಿದೆ. ಪ್ರಸ್ತಾವಿತ ಶಾಸನವು ಸಾಲಗಳನ್ನು ಪಡೆಯುವ ಮತ್ತು ನಂತರ ಸಾಲಗಳಲ್ಲಿಯೇ ಮುಳುಗಿಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಕುರಿತಾಗಿದೆ.

ಪ್ರಸ್ತಾವಿತ ಶಾಸನವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು, ರೈತರಿಂದ ಕೃಷಿ ಉತ್ಪನ್ನಗಳನ್ನು ಪಡೆದು ಕೃಷಿ ಸರಕುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಅಥವಾ ಬಡವರಿಗೆ ಸಾಲವನ್ನು ನೀಡುವ ಮತ್ತು ಅಸಲನ್ನಡು ಬಡ್ಡಿಯೊಂದಿಗೆ ನಗದು ಅಥವಾ ವಸ್ತು ರೂಪದಲ್ಲಿ ತೆಗೆದುಕೊಳ್ಳುವ ಲೇವಾದೇವಿದಾರರು ಅಥವಾ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆ ಅಥವಾ ಅಮಾನವೀಯ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು ವಿಶೇಷವಾಗಿ ಮಹಿಳೆಯರು ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳನ್ನು ರಕ್ಷಿಸಲು ಹಾಗೂ ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳನ್ನು ನಿಯಂತ್ರಿಸಲು ಪರಿಣಾಮಕಾರಿಯಾದ ಕಾರ್ಯವ್ಯವಸ್ಥೆಯನ್ನು ಸೃಜಿಸುವ ಉದ್ದೇಶಕ್ಕಾಗಿ ರೂಪುಗೊಳಿಸಿರುವ ವಿಧೇಯಕವಾಗಿದೆ.

ಈ ಕುರಿತು ಸಚಿವಸಂಪುಟದಲ್ಲಿ ಸುದೀರ್ಘವಾಗಿ ಚರ್ಚಿಸಿ ಪ್ರತಿಬಂಧಕ ಕಾಯಿದೆಯನ್ನು ತರುವುದು ಸೂಕ್ತವೆಂದು ತೀರ್ಮಾನಿಸಿ ಸದರಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ವಿಧಾನಸಭೆಯ ಎಲ್ಲಾ ಸದಸ್ಯರು ಸದರಿ ವಿಧೇಯಕವನ್ನು ಪರ್ಯಾಲೋಚಿಸಿ ವಿಧೇಯಕವನ್ನು ಅಂಗೀಕರಿಸಲು ಬೆಂಬಲವನ್ನು ನೀಡಬೇಕೆಂದು ಕೋರಿದರು.

ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025 ವಿಧೇಯಕ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪನಾಯಕರು, ಬೆಲ್ಲದ್, ಲಕ್ಷ್ಮಣ್ ಸವದಿ, ರಂಗನಾಥ್ ಇನ್ನಿತರ ಸದಸ್ಯರು ವಿಧೇಯಕದ ಕುರಿತು ಸದನದಲ್ಲಿ ಮಾತನಾಡಿ ವಿಧಾನಸಭೆಯ ಎಲ್ಲಾ ಸದಸ್ಯರು ವಿಧೇಯಕದ ಅಂಗೀಕಾರಕ್ಕೆ ಒಮ್ಮತದ ಬೆಂಬಲ ಸೂಚಿಸಿದ ನಂತರ ವಿಧೇಯಕವು ಅಂಗೀಕಾರಗೊಂಡಿತು.

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಅಧಿನಿಯಮ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿμÉೀಧ (ತಿದ್ದುಪಡಿ) ಅಧಿನಿಯಮ 2025, ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಅಧಿನಿಯಮ 2025) ವಿಧೇಯಕಗಳನ್ನು ಸಹಕಾರ ಸಚಿವ ಕ್ಯಾತ್ಸಂದ್ರ ಎನ್ ರಾಜಣ್ಣ ಅವರು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ವಿಧಾನಸಭೆಯಲ್ಲಿ ಕೋರಿದರು. ವಿಧಾನಸಭೆಯ ಸದಸ್ಯರು ಮೂರು ವಿಧೇಯಕಗಳನ್ನು ಪರ್ಯಾಲೋಚಿಸಿ ವಿಧೇಯಕಗಳಿಗೆ ಒಮ್ಮತದ ಬೆಂಬಲ ವ್ಯಕ್ತಪಡಿಸಿದ ನಂತರ ವಿಧೇಯಕಗಳು ಅಂಗೀಕೃತವಾಯಿ

Leave a Reply

Your email address will not be published. Required fields are marked *