Screenshot 2025 03 26 19 00 39 380 com.whatsapp

ನವದೆಹಲಿ : ಬಸವನ ಗೌಡ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ…

National - ಕನ್ನಡ POLATICAL STATE

ಬಸವನ ಗೌಡ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ…

ನವದೆಹಲಿ : ಬಿಜೆಪಿ ಶಾಸಕ ಬಸವನ ಗೌಡ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ.

ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.

20250326 185607

ಬಿಜೆಪಿ ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿ ಆದೇಶದಲ್ಲಿ ತಿಳಿಸಲಾಗಿದೆ.

 

Leave a Reply

Your email address will not be published. Required fields are marked *