ರಿಯಾಯಿತಿ ದರದಲ್ಲಿ ಶೇಂಗಾ ಬಿತ್ತನೆ ಬೀಜಗಳನ್ನು ವಿತರಣೆ
ಪಾವಗಡ: ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಶೇಂಗಾ ವಿತರಣೆ ಮಾಡುತ್ತಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಹೆಚ್. ವಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಎ.ಪಿ.ಎಂ.ಸಿ ಯಾರ್ಡ್ ಆವರಣದಲ್ಲಿ ಸೋಮವಾರ ಶೇಂಗಾ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ರೈತರಿಗೂ ಸಮಾನವಾಗಿ ಉತ್ತಮ ಗುಣಮಟ್ಟದ ಶೇಂಗಾ ಬಿತ್ತನೆ ಬೀಜಗಳನ್ನು ನೀಡಲಾಗುತ್ತಿದೆ ಎಂದರು.
ರೈತರಿಗಾಗಿ 750 ಕ್ವಿಂಟಾಲ್ ಶೇಂಗಾ ಬೀಜ
ತರಿಸಲಾಗಿದ್ದು, ತಾಲ್ಲೂಕಿನ ಲಿಂಗದಹಳ್ಳಿ ನಾಗಲಮಡಿಕೆ, ನಿಡಗಲ್, ವೈಎನ್ ಹೊಸಕೋಟೆ
ಕೇಂದ್ರಗಳಲ್ಲಿ ಶೇಂಗಾ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು ಎಂದರು.
ಕೃಷಿ ಸಹಾಯಕ ನಿರ್ದೇಶಕರಾದ ಅಜಯ್ ಕುಮಾರ್ ಮಾತನಾಡಿ.
2025 -26 ನೇ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾಗಿ ಬಿತ್ತನೆ ಕಾರ್ಯ ಚುರುಕುಕೊಂಡಿದ್ದು . ಕೃಷಿ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಶೇಂಗಾ, ಭತ್ತ ರಾಗಿ ಅಲಸಂದಿ ಬೀಜಗಳನ್ನು ನೀಡಲಾಗುತ್ತಿದ್ದು , ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈಗಾಗಲೇ ತಾಲ್ಲೂಕಿನ 04 ರೈತ ಸಂಪರ್ಕ ಕೇಂದ್ರಗಳಲ್ಲಿ ಶೇಂಗಾ ಬಿತ್ತನೆ ಬೀಜ ವಿತರಣೆ ಮಾಡುತ್ತಿದ್ದು ಲಿಂಗದಹಳ್ಳಿಯಲ್ಲಿ ಹೆಚ್ಚುವರಿಯಾಗಿ ಒಂದು ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ರೈತರು ಇದರ ಸದುಪಯೋಗವನ್ನು
ಕಳೆದುಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷರಾದ ಆರ್ ಎ ಹನುಮಂತರಾಯಪ್ಪ, ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ , ಪೂಜಾರಪ್ಪ ,ಕೃಷ್ಣಾ ರಾವ್ ಕಾಂಗ್ರೆಸ್ ಮುಖಂಡರಾದ ಹರೀಶ್ ರವರು,ಶಿವಮೂರ್ತಿ ಸೇರಿ ಇನ್ನೂ ಮುಂತಾದವರು ಇದ್ದರು..