IMG 20250805 WA0012

ಪಾವಗಡ: ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ….!

DISTRICT NEWS ತುಮಕೂರು

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ.

ಪಾವಗಡ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಸಬಾ ಗ್ರಾಮಾಂತರ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಂಗಳವಾರ ಚಾಲನೆ ನೀಡಿದರು.

ಕ್ರೀಡಾಕೂಟ ಉದ್ಘಾಟಿಸಿದ ಮಾತನಾಡಿ,ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಾತನಾಡಿ. ವಿದ್ಯಾರ್ಥಿಗಳಲ್ಲಿ ದಿನನಿತ್ಯದ ದೈನಂದಿನ ಚಟುವಟಿಕೆಗಳ ಜೊತೆಗೆ ಕ್ರೀಡಾ ಆಸಕ್ತಿ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ವಿದ್ಯಾರ್ಥಿ ಜೀವನದಿಂದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳುವ ಮೂಲಕ ಸಾಧನೆ ಮಾಡಬೇಕು ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಕ್ರೀಡೆಗಳನ್ನು ಆಡಿ ತಾಲೂಕು, ಜಿಲ್ಲೆ, ರಾಜ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಬೇಕೆಂದರು.

ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಮತ್ತು ಮನೋವಿಕಾಸಕ್ಕೆ ಸಹಕಾರಿಯಾಗುತ್ತವೆ ಕ್ರೀಡೆಗಳಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ತಂಡೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತಹ ನಿಪುಣತೆ ಪಡೆಯಬಹುದೆಂದರು.

ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸುಸ್ಥಿತಿಯ ಬೆಳವಣಿಗೆ ಉಂಟಾಗುತ್ತದೆ. ಹಾಗಾಗಿ ಶಿಕ್ಷಕರು ಮಕ್ಕಳನ್ನು ಕೇವಲ ಕ್ರೀಡಾಕೂಟಗಳಿಗೆ ಮಾತ್ರ ಭಾಗವಹಿಸುವಂತೆ ಮಾಡದೆ ಪ್ರತಿನಿತ್ಯವು ಶಾಲೆಗಳಲ್ಲಿ ಒಂದು ಅವಧಿಯನ್ನು ಕ್ರೀಡೆಗೆ ಮೀಸಲಿಟ್ಟು, ಶಾಲೆಗಳಲ್ಲಿ ಲಭ್ಯವಿರುವಂತಹ ಕ್ರೀಡಾ ಸಾಮಗ್ರಿಗಳನ್ನು ಮಕ್ಕಳಿಗೆ ನೀಡಬೇಕೆಂದು ಸಲಹೆ ನೀಡಿದರು.
ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಆಟೊಗಳನ್ನು ಗಮನಿಸಿ ಯಾವುದೇ ಪಕ್ಷಪಾತವಿಲ್ಲದೆ ಸರಿಯಾದ ರೀತಿಯಲ್ಲಿ ತೀರ್ಪನ್ನು ತೀರ್ಪುಗಾರರು ನೀಡಬೇಕೆಂದರು.

ಕಾರ್ಯಕ್ರಮ ಉದ್ದೇಶಿಸಿ ಬಿ ಆರ್ ಸಿ ವೆಂಕಟೇಶ್ ಜಿ ಮಾತನಾಡಿ,
ಕ್ರೀಡೆಯಿಂದ ಸದೃಢ ಮನಸ್ಸು ಹೊಂದಲು ಸಾಧ್ಯವಾಗುತ್ತದೆ ಎಂದು, ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದರು.
ಸದೃಢ ದೇಹವಿದ್ದರೆ ಸದೃಢ ಮನಸ್ಸಿರಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ವಿಜಯ್ ಕುಮಾರ್, ಇ.ಸಿ.ಓ ವೇಣುಗೋಪಾಲ್ ರೆಡ್ಡಿ,, ತಾಲೂಕು ದೈಹಿಕ ಶಿಕ್ಷಣ, ಸಂಘದ ಅಧ್ಯಕ್ಷ ಕರಿಯಣ್ಣ, ರಾಷ್ಟ್ರ ಪ್ರಗತಿ ಕರಿಯಣ್ಣ, ಪಂಚವಟಿ ಶಾಲೆಯ ಮುಖ್ಯ ಶಿಕ್ಷಕ ಗಂಗಯ್ಯ, ಸಹ ಶಿಕ್ಷಕ ಹನುಮಂತರಾಯಪ್ಪ, ವಿವಿಧ ಶಾಲೆಗಳ ದೈಹಿಕ ಶಿಕ್ಷಕರು ಮತ್ತು ಕ್ರೀಡಾಪಟುಗಳು ಭಾಗವಹಿಸಿದ್ದರು.